ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್‌ಸರ್ಕಾರದಲ್ಲಿ ನಾಡಿಗಾಗಿ ದುಡಿದ ಮಹನೀಯರಿಗೆ ರಕ್ಷಣೆಯೇ ಇಲ್ಲ ! ಎಂದು ಜೆಡಿಎಸ್ ಆರೋಪಿಸಿದೆ.
ನಡೆದಾಡುವ ದೇವರು ಎಂದೇ ಪ್ರಖ್ಯಾತರಾಗಿದ್ದ ಕರ್ನಾಟಕ ರತ್ನ, ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಲಿಂಗೈಕ್ಯ ಪೂರಮಪೂಜ್ಯ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳ ಪುತ್ಥಳಿಯನ್ನು ಕಿಡಿಗೇಡಿ ವಿರೂಪಗೊಳಿಸಿರುವುದು ಖಂಡನೀಯ ಎಂದು ಜೆಡಿಎಸ್ ತೀವ್ರವಾಗಿ ಖಂಡಿಸಿದೆ.
ಈ ದುಷ್ಕೃತ್ಯವನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಪರಮಪೂಜ್ಯರ ಪುತ್ಥಳಿಯನ್ನು ವಿರೂಪಗೊಳಿಸಿದ ಕಿಡಿಗೇಡಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಕೋಟ್ಯಂತರ ಭಕ್ತರ ಆರಾಧ್ಯ ದೈವ ಶ್ರೀ ಶಿವಕುಮಾರ ಸ್ವಾಮೀಜಿಗಳ ಹೊಸ ಪ್ರತಿಮೆಯನ್ನುಕರ್ನಾಟಕ ಕಾಂಗ್ರೆಸ್ ಸರ್ಕಾರ ಅದೇ ಜಾಗದಲ್ಲಿ ಪುನಃ ಪ್ರತಿಷ್ಠಾಪಿಸಬೇಕು ಎಂದು ಜೆಡಿಎಸ್ ಆಗ್ರಹ ಮಾಡಿದೆ.
ಇಟಲಿ ಮಾತೆಯ ಆದೇಶವನ್ನು ಶಿರಸಾವಹಿಸಿ ಪಾಲಿಸುವ ಸಿಎಂ , ಡಿಸಿಎಂ ಕರ್ನಾಟಕದ ಮಹನೀಯರ ಬಗ್ಗೆ ಗೌರವವಿರಲಿ. ಮಹಾನ್‌ಸಾಧಕರ ಪುತ್ಥಳಿ ಹಾಗೂ ಪ್ರತಿಮೆಗಳಿಗೆ ಸೂಕ್ತ ರಕ್ಷಣೆ ಕಲ್ಪಿಸಲಿ ಎಂದು ಆಗ್ರಹ ಮಾಡಿದ್ದಾರೆ.