ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ವ್ಯಾಪ್ತಿಯಲ್ಲಿ 8 ವರ್ಷಗಳ ಬಳಿಕ ಬೃಹತ್ ನೇಮಕಾತಿ ನಡೆದಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದಲ್ಲಿ 8 ವರ್ಷಗಳ ಬಳಿಕ 2000 ಚಾಲಕ-ಕಂ- ನಿರ್ವಾಹಕ ಅಭ್ಯರ್ಥಿಗಳಿಗೆ ನಿಯೋಜನಾ ಆದೇಶ ವಿತರಣೆಯನ್ನು ಮಾಡಲು ತೀರ್ಮಾನಿಸಿದ್ದು, ಸಾಂಕೇತಿಕವಾಗಿ ಇಂದು 51 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ವಿತರಣೆ ಮಾಡಲಾಯಿತು.
ಚಾಲನಾ ಸಿಬ್ಬಂದಿಯ ನೇಮಕಾತಿಯು ಪಾರದರ್ಶಕವಾಗಿ ಮಾಡಿದ್ದು, ಮಾನವ ಹಸ್ತಕ್ಷೇಪವಿರುವುದಿಲ್ಲ. ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆಗೊಳಿಸಲಾಗಿರುತ್ತದೆ.
ನಾಲ್ಕು ಸಾರಿಗೆ ನಿಗಮಗಳಿಂದ ಸುಮಾರು 1000ಕ್ಕೂ ಹೆಚ್ಚು ಮೃತರ ಅವಲಂಭಿತರಿಗೆ ನೌಕರಿಯನ್ನು ನೀಡಿದ್ದು, ಸುಮಾರು 9000 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಈಗಾಗಲೇ 7500 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಪೂರ್ಣಗೊಂಡಿರುತ್ತದೆ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.
ಅಪಘಾತದಿಂದ ಮೃತಪಟ್ಟ ಚಾಲನಾ ಸಿಬ್ಬಂದಿಗಳ ಕುಟುಂಬವನ್ನು ಆರ್ಥಿಕವಾಗಿ ಸಧೃಡಗೊಳಿಸುವ ಸಲುವಾಗಿ 1 ಕೋಟಿ ವಿಮಾ ಯೋಜನೆ, ಸ್ವಾಭಾವಿಕವಾಗಿ ಮೃತಪಟ್ಟ ಚಾಲನಾ ಸಿಬ್ಬಂದಿಗಳ ಕುಟುಂಬಕ್ಕೆ 10 ಲಕ್ಷಗಳ ಕುಟುಂಬ ಕಲ್ಯಾಣ ಯೋಜನೆಯಡಿ ಪರಿಹಾರವನ್ನು ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ನೇಮಕಗೊಂಡ 2000 ಚಾಲಕ-ಕಂ- ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ. ಇದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ. ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆಗೊಳಿಸಲಾಗಿದೆ ಎಂದು ಹೇಳಿದರು.ಹೊಸದಾಗಿ ನೇಮಕಗೊಂಡ ಸಿಬ್ಬಂದಿ ಸಂಸ್ಥೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸಬೇಕು ಹಾಗೂ ಮಹಿಳಾ ಪ್ರಯಾಣಿಕರೊಂದಿಗೆ, ವಿದ್ಯಾರ್ಥಿಗಳೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಎಂದು ಸಚಿವರು ಸಲಹೆ ನೀಡಿದರು.
ಮುಂದುವರೆದು ಮಾತನಾಡಿದ ಅವರು, ಅಪಘಾತ ಸಂಭವಿಸದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಿ. ನಿಗಮವು ಕೊರೋನಾ ನಂತರ ಹಲವು ಅಡೆತಡೆಗಳನ್ನು ಎದುರಿಸಿಕೊಂಡು ಆರ್ಥಿಕವಾಗಿ ಯಶಸ್ಸಿನ ಮಾರ್ಗವನ್ನು ನೋಡುತ್ತಿದೆ. ಹಲವಾರು ಕಾರ್ಮಿಕ ಸ್ನೇಹಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದೆ. ನೌಕರರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಯನ್ನು ಒದಗಿಸಲಾಗುತ್ತಿದೆ ಎಂದು ಹೇಳಿದರು.
4 ಸಾರಿಗೆ ನಿಗಮಗಳಿಂದ 1000 ಕ್ಕೂ ಹೆಚ್ಚು ಮೃತರ ಅವಲಂಬಿತರಿಗೆ ನೌಕರಿಯನ್ನು ನೀಡಿದ್ದು, ಸುಮಾರು 9000 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದೆ. ಈಗಾಗಲೇ 7500 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಪೂರ್ಣಗೊಂಡಿದೆ. ಅಪಘಾತದಿಂದ ಮೃತಪಟ್ಟ ಚಾಲನಾ ಸಿಬ್ಬಂದಿಗಳ ಕುಟುಂಬವನ್ನು ಆರ್ಥಿಕವಾಗಿ ಸಧೃಡಗೊಳಿಸುವ ಸಲುವಾಗಿ 1 ಕೋಟಿ ರೂ. ವಿಮಾ ಯೋಜನೆ, ಸ್ವಾಭಾವಿಕವಾಗಿ ಮೃತಪಟ್ಟ ಚಾಲನಾ ಸಿಬ್ಬಂದಿಗಳ ಕುಟುಂಬಕ್ಕೆ 10 ಲಕ್ಷ ರೂ.ಗಳನ್ನು ಕಟುಂಬ ಕಲ್ಯಾಣ ಯೋಜನೆ ಅಡಿ ಪರಿಹಾರ ನೀಡಲಾಗುತ್ತಿದೆ ಎಂದು ತಿಳಿಸಿದರು.
ಕೆ.ಎಸ್.ಆರ್.ಟಿ.ಸಿ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ್, ಉಪಾಧ್ಯಕ್ಷ ಮೊಹಮ್ಮದ್ ರಿಜ್ವಾನ್ ನವಾಬ್, ಕರಾರಸಾ ನಿಗಮ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ, ನಿರ್ದೇಶಕಿ ಡಾ. ನಂದಿನಿದೇವಿ ಕೆ, ನಿರ್ದೇಶಕ ಇಬ್ರಾಹಿಂ ಮೈಗೂರ, ಕಾರ್ಮಿಕ ಮುಖಂಡರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.