ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ :
ಲೋಕಾಯುಕ್ತ ಸಂಸ್ಥೆಯಲ್ಲಿರುವ ಸುಲಿಗೆಕೋರರ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿರುವ ಹಿನ್ನೆಲೆಯಲ್ಲಿ ಲೋಕಾಯುಕ್ತ ಸಂಸ್ಥೆಯಲ್ಲಿಯ ಅದಕ್ಷತೆ ಮತ್ತು ಭ್ರಷ್ಟಾಚಾರ ಹಾಗೂ ಲೋಕಾಯುಕ್ತ ಸಂಸ್ಥೆಯಲ್ಲಿ ಈ ಕೂಡಲೇ ಅತ್ಯಗತ್ಯವಾಗಿ ಆಗಬೇಕಿರುವ ಸುಧಾರಣೆಗಳ ಕುರಿತು ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಲಾಯಿತು.
ಲೋಕಾಯುಕ್ತ ಚಿತ್ರದುರ್ಗ ಕಚೇರಿಗೆ ಭೇಟಿ ನೀಡಿ ಚಿತ್ರದುರ್ಗ ಜಿಲ್ಲಾ ಸಮಿತಿಯ ಜಿಲ್ಲಾಧ್ಯಕ್ಷ ಎನ್ ಟಿ ನಾಗರೆಡ್ಡಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್ ಬಾಲರಾಜ್ ರವರ ಸಮ್ಮುಖದಲ್ಲಿ ಮನವಿಯನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯನಿರ್ವಾಹಕ ಸದಸ್ಯ ಮಹೇಶ್ ಸಿ ನಗರಂಗೆರೆ ಹಾಗೂ ಕಾರ್ಯಕರ್ತ ತಿಪ್ಪೇಸ್ವಾಮಿ ಚಿಕ್ಕೊಬನಹಳ್ಳಿ ಇವರು ಉಪಸ್ಥಿತರಿದ್ದರು.