ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸ್ಕ್ಯಾಮ್ ಸರ್ಕಾರ ಈಗ ಸ್ಮಾರ್ಟ್ ಮೀಟರ್ ಹೆಸರಲ್ಲಿ ದರೋಡೆಗೆ ಹೊರಟಿದೆ ಎಂದು ಬಿಜೆಪಿ ಆರೋಪಿಸಿದೆ.
ಇಂಧನ ಇಲಾಖೆಯಲ್ಲಿ ಸ್ಮಾರ್ಟ್ ಮೀಟರ್ ಖರೀದಿ ಮತ್ತು ಅಳವಡಿಕೆಯಲ್ಲಿ 15,568 ಕೋಟಿ ರೂ.ಗಳ ಹಗರಣ ನಡೆಸಿದೆ ಸರ್ಕಾರ. ಈಗ ಸ್ಮಾರ್ಟ್ ಮೀಟರ್‌ಅನ್ನು ಕಡ್ಡಾಯಗೊಳಿಸಿರುವ ಸರ್ಕಾರಕ್ಕೆ ಹೈಕೋರ್ಟ್ ತಪರಾಕಿ ಹಾಕಿದೆ.
ಆರ್ಥಿಕವಾಗಿ ದಿವಾಳಿಯಾಗಿರುವ ಕಾಂಗ್ರೆಸ್ ಸರ್ಕಾರ ಈಗ ಜನರನ್ನು ಸುಲಿಗೆ ಮಾಡಲು ಸ್ಮಾರ್ಟ್ ಮೀಟರ್ ಅಳವಡಿಸುವುದನ್ನು ಕಡ್ಡಾಯಗೊಳಿಸಿ ಶೇ.400-800ರಷ್ಟು ದರ ಏರಿಕೆ ಮಾಡಿ ಜನರನ್ನು ಲೂಟಿ ಮಾಡಲು ಹೊರಟಿದೆ ಎಂದು ಬಿಜೆಪಿ ಕಿಡಿ ಕಾರಿದೆ.