ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡಿಗರ ಹೆಮ್ಮೆಯ ಬಹುಭಾಷಾ ನಟಿ ಅಭಿನಯ ಸರಸ್ವತಿ ಬಿ. ಸರೋಜಾ ದೇವಿ ಅವರ ನಿಧನಕ್ಕೆ ಸಂತಾಪ ಕೋರುವೆ. ಪದ್ಮಶ್ರೀ, ಪದ್ಮಭೂಷಣ ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿದ್ದ ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಂತಾಪ ಸೂಚಿಸಿದ್ದಾರೆ.
ಮೇರು ನಟರಾದ ರಾಜ್ಕುಮಾರ್, ಕಲ್ಯಾಣ್ ಕುಮಾರ್ ಮೊದಲಾದ ನಟರೊಂದಿಗೆ ಅಭಿನಯಿಸಿ ಕನ್ನಡ ಚಿತ್ರರಂಗವಷ್ಟೇ ಅಲ್ಲದೇ ಬಹುಭಾಷಾ ನಟಿಯಾಗಿ ಕಲಾರಂಗಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ.
ಅಮರ ಶಿಲ್ಪಿ ಜಕಣಾಚಾರಿ, ಮಲ್ಲಮ್ಮನ ಪವಾಡ, ಭಾಗ್ಯವಂತರು, ಬಬ್ರುವಾಹನ ಕಥಾಸಂಗಮ ಸೇರಿದಂತೆ ಬಹು ಭಾಷೆಗಳ ಸಿನಿಮಾಗಳಲ್ಲಿನ ಅವರ ನಟನೆ ಕಲಾಭಿಮಾನಿಗಳಲ್ಲಿ ಶಾಶ್ವತವಾಗಿರಲಿದೆ.
ಸರೋಜಾ ದೇವಿ ಅವರ ಅಗಲಿಕೆಯ ನೋವಿನಲ್ಲಿರುವ ಅವರ ಕುಟುಂಬ ವರ್ಗ ಹಾಗೂ ಅವರ ಅಪಾರ ಅಭಿಮಾನಿಗಳ ದುಃಖದಲ್ಲಿ ನಾವೂ ಸಹ ಭಾಗಿಯಾಗಿದ್ದೇವೆ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಸಂತಾಪ ಸೂಚಿಸಿದ್ದಾರೆ.