ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಪ್ರಸವ ಪೂರ್ವ ಮತ್ತು ಗರ್ಭಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾಯ್ದೆಯಡಿ ಗರ್ಭಿಣಿಯರ ಸ್ಕ್ಯಾನಿಂಗ್ ವೇಳೆ ಜನನ ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ ಅಂಕಪಟ್ಟಿ ಅಥವಾ ವರ್ಗಾವಣೆ ಪ್ರಮಾಣ ಪತ್ರ,
ಶಾಲಾ ಜನ್ಮ ದೃಢೀಕರಣ ಪತ್ರ ನೀಡುವುದು ಕಡ್ಡಾಯವಾಗಿದೆ. ಕಾಯ್ದೆಯಡಿ ಜನ್ಮ ದಿನಾಂಕ ದೃಢೀಕರಣಕ್ಕೆ ಆಧಾರ್ ಕಾರ್ಡ್ ಅನ್ನು ಪರಿಗಣಿಸುವುದಿಲ್ಲ.
ಆದ್ದರಿಂದ ಜಿಲ್ಲಾ ಆಸ್ಪತ್ರೆಗೆ ಸ್ಕ್ಯಾನಿಂಗ್ ಬರುವ ಗರ್ಭಿಣಿಯರು ಈ ದಾಖಲೆಗಳ ಪೈಕಿ ಒಂದರ ಜರಾಕ್ಸ್ ಪ್ರತಿಯನ್ನು ತಪ್ಪದೇ ತರುವಂತೆ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ ತಿಳಿಸಿದ್ದಾರೆ.