ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಪ್ರಕಟ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಉಚ್ಛನ್ಯಾಯಾಲಯದಿಂದ ಅಕ್ಟೋಬರ್ 19, 2023 ಕಚೇರಿ ಅಧಿಸೂಚನೆಯನ್ವಯ 14 ಜಿಲ್ಲಾ ನ್ಯಾಯಾಧೀಶರುಗಳ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿತ್ತು.

- Advertisement - 

ಅದರನ್ವಯ ನೇರ ನೇಮಕಾತಿ ಮೂಲಕ ಜಿಲ್ಲಾ ನ್ಯಾಯಾಧೀಶರಾಗಿ ನೇಮಕಗೊಳ್ಳಲು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿದ್ದು ಎರಡರಲ್ಲೂ ಗಳಿಸಿದ ಒಟ್ಟು ಅಂಕಗಳ ಆಧಾರದ ಮೇಲೆ ಪರಿಶಿಷ್ಟ ಜಾತಿಯ (SC/UR) ಗೀತಾ ಸಿಂಧೆ ಮತ್ತು ಪರಿಶಿಷ್ಟ ಜಾತಿಯ ವಿಶೇಷ ಚೇತನ ಮೀಸಲಾತಿಯಡಿ (SC/PwBD) ಸುರೇಂದ್ರ ಜಿ.  ಅಭ್ಯರ್ಥಿಗಳನ್ನು ನೇಮಕ ಮಾಡಲಾಗಿದೆ.

- Advertisement - 

ಜಿಲ್ಲಾ ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಕರ್ನಾಟಕ ಹೈಕೋರ್ಟ್ ವೆಬ್ ಸೈಟ್ https://karnatakajudiciary.kar.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಕರ್ನಾಟಕ ಉಚ್ಛ ನ್ಯಾಯಲಯದ ರಿಜಿಸ್ಟರ್ ಜನರಲ್ ಕೆ.ಎಸ್. ಭರತ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement - 
Share This Article
error: Content is protected !!
";