ಹಿರಿಯ ಪತ್ರಕರ್ತ ವೀರಪ್ಪಭಾವಿ ನಿಧನ

News Desk

ಹಿರಿಯ ಪತ್ರಕರ್ತ
ವೀರಪ್ಪಭಾವಿ ನಿಧನ

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಿರಿಯ ಪತ್ರಕರ್ತ, ಇಂದಿನ ಸುದ್ದಿ ಸಂಪಾದಕರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ಎಂ.ವೀರಪ್ಪಬಾವಿ (63) ಅವರು ನಿಧನರಾಗಿದ್ದಾರೆ.

ಪತ್ನಿ, ಇಬ್ಬರು ಪುತ್ರರು, ಪುತ್ರಿ ಸೇರಿದಂತೆ ಬಂದು ಬಳಗವನ್ನು ಅಗಲಿದ್ದಾರೆ.

ವೀರಪ್ಪ ಭಾವಿ ಅವರು ಕಳೆದ 45 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. 30 ವರ್ಷಗಳಿಂದ ಇಂದಿನ ಸುದ್ಧಿ ಪತ್ರಿಕೆ ಸಂಪಾದಕರಾಗಿ, ದಾವಣಗೆರೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ, ವಿವಿಧ ಸಂಘ ಸಂಸ್ಥೆಗಳ ಸಂಚಾಲಕರಾಗಿ ವೀರೇಶ್ವರ ಮಠದ ಸಂಯೋಜಕರಾಗಿ ಕೆಲಸ ಮಾಡಿದ್ದಾರೆ. ಪತ್ರಿಕೋದ್ಯಮದ ಜೊತೆ ಸಮಾಜ ಸೇವೆ, ಶಿಕ್ಷಣ, ಆರೋಗ್ಯ ಸೇವಾ ಕ್ಷೇತ್ರಗಳಲ್ಲೂ ತಮ್ಮನ್ನು ತೊಡಗಿಸಿಕೊಂಡು ಜನಾನುರಾಗಿಯಾಗಿದ್ದರು.

ಕೆಯುಡಬ್ಲೂಜೆ ಸಂತಾಪ:

ಅಗಲಿದ ಹಿರಿಯ ಪತ್ರಕರ್ತ
ವೀರಪ್ಪ ಭಾವಿ ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರ ಆತ್ಮಕ್ಕೆ ಶಾಂತಿ ಸಿಗಲಿ. ದುಃಖ ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಅವರು ಪ್ರಾರ್ಥಿಸಿದ್ದಾರೆ.

- Advertisement -  - Advertisement - 
Share This Article
error: Content is protected !!
";