ಚಂದ್ರವಳ್ಳಿ ನ್ಯೂಸ್, ದಾವಣಗೆರೆ:
ದಾವಣಗೆರೆ ನಗರದ ಹೋಟೆಲ್ ಒಂದರಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ನೇತೃತ್ವದಲ್ಲಿ ವಿಜಯೇಂದ್ರ ಬೆಂಬಲಿಸಿ ಪ್ರತ್ಯೇಕ ಸಭೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟಿಸಬೇಕು ಎಂದು ಸಭೆಯಲ್ಲಿ ಚರ್ಚೆ ನಡೆದು ಹೈಕಮಾಂಡ್ಗೆ ದೂರು ನೀಡಲು ಸಿದ್ಧತೆ ಮಾಡಿದ್ದಾರೆ ಎನ್ನಲಾಗಿದೆ.
ಮಹತ್ವದ ಮತ್ತು ಅತ್ಯಂತ ಕುತೂಹಲ ಕೆರಳಿಸಿರುವ ಗೌಪ್ಯ ಸಭೆಯಲ್ಲಿ ಮಾಜಿ ಸಚಿವ ಎಸ್. ಎ. ರವೀಂದ್ರನಾಥ್, ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಸೋಮಶೇಖರ್ ರೆಡ್ಡಿ, ಹರತಾಳು ಹಾಲಪ್ಪ, ಸೀಮಾ ಮಸೂತಿ ಸೇರಿ 35ಕ್ಕೂ ಹೆಚ್ಚಿನ ಮಾಜಿ ಶಾಸಕರು, ಮಾಜಿ ಸಚಿವರು ಸಭೆಯಲ್ಲಿ ಭಾಗಿಯಾಗಿಯಾಗಿದ್ದರು ಎನ್ನಲಾಗಿದೆ. ಮಾಜಿ ಶಾಸಕರು, ಮಾಜಿ ಸಚಿವರು ಮಹತ್ವದ ಸಭೆ ಆರಂಭವಾಗುವುದಕ್ಕೂ ಮುಂಚೆ ದಾವಣಗೆರೆ ನಗರದ ದುರ್ಗಮ್ಮ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಮಾಜಿ ಶಾಸಕ ಸೋಮಶೇಖರ್ ರೆಡ್ಡಿ ಭಾನುವಾರದ ಸಭೆಯ ಬಗ್ಗೆ ಮಾತನಾಡಿ, ಪಕ್ಷದ ನಾಯಕ ಬಸನಗೌಡ ಪಾಟೀಲ್‌ಯತ್ನಾಳ್‌ಗೆ ಮನದಟ್ಟು ಮಾಡಲು ಈ ಸಭೆ ಮಾಡುತ್ತಿದ್ದೇವೆ. ಸಭೆ ಮಾಡಿ ದಿಲ್ಲಿಗೆ ಹೋಗಿ ಹೈಕಮಾಂಡ್ ಗೆ ನೂರಕ್ಕೆ ನೂರರಷ್ಟು ದೂರು ನೀಡಲಾಗುತ್ತದೆ ಎನ್ನಲಾಗಿದೆ.
ಯತ್ನಾಳ್, ರಾಜ್ಯಾಧ್ಯಕ್ಷರ ಬಗ್ಗೆ ಹಾಗೂ ಯಡಿಯೂರಪ್ಪ ನವರ ವಿರುದ್ದ ನಿರಂತರವಾಗಿ ಟೀಕೆ ಮಾಡುತ್ತಿದ್ದಾರೆ. ಎಷ್ಟೋ ವರ್ಷಗಳಿಂದ ಬಿಜೆಪಿ ಕಟ್ಟಿ ಬೆಳೆಸಿದ ನಾಯಕ ಯಡಿಯೂರಪ್ಪನವರು. ಅವರ ವಿರುದ್ಧ ಮಾತನಾಡುತ್ತಿರುವುದು ತಪ್ಪು ಎಂದು ಮನದಟ್ಟು ಮಾಡಿಸೋಕೆ ಸಭೆ ಮಾಡುತ್ತಿದ್ದೇವೆ ಎಂದು ಇವರು ತಿಸಿದ್ದಾರೆ. ಬಿವೈ ವಿಜಯೇಂದ್ರ ಅವರೇ ಮುಂದಿನ ಚುನಾವಣೆವರೆಗೂ ರಾಜ್ಯಾಧ್ಯಕ್ಷರಾಗಿರುತ್ತಾರೆ ಎಂದು ಅವರು ಹೇಳಿದ್ದಾರೆ.