ಸಿದ್ದರಾಮಯ್ಯ ಸ್ವಕ್ಷೇತ್ರದಲ್ಲಿ ಮಹಿಳಾ ಅಧಿಕಾರಿಯೊಬ್ಬರಿಗೆ ನಿಂದನೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಶಿಡ್ಲಘಟ್ಟದ ಪೌರಾಯುಕ್ತೆಯ ಮೇಲೆ ನಿಂದನೆ, ಬೆದರಿಕೆ ಪ್ರಕರಣ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಅವರ ಸ್ವಕ್ಷೇತ್ರ ವರುಣಾದಲ್ಲಿ ಮಹಿಳಾ ಅಧಿಕಾರಿಯೊಬ್ಬರ ಮೇಲೆ ನಿಂದನೆ ನಡೆಸಿ, ಜೀವ ಬೆದರಿಕೆ ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ.

ವರುಣಾ ಹೋಬಳಿ ಗುಡಮಾದನಹಳ್ಳಿ ಗ್ರಾಮದ ಬಳಿ ನಿಮ್ಹಾನ್ಸ್ ಮಾದರಿಯ ಆಸ್ಪತ್ರೆ ನಿರ್ಮಾಣ ನಿಟ್ಟಿನಲ್ಲಿ ಗುರುತಿಸಲಾದ ಜಮೀನು ಪರಿಶೀಲನೆಗಾಗಿ ತೆರಳಿದ್ದ ಭವ್ಯ ಎಂಬ ಮಹಿಳಾ ಅಧಿಕಾರಿ ವಿರುದ್ಧ ಸ್ಥಳೀಯ

- Advertisement - 

ಪುಡಾರಿಯೊಬ್ಬ ಜಗಳ ಆರಂಭಿಸಿ ಕೊಲೆ ಬೆದರಿಕೆ ಒಡ್ಡಿರುವ ಆಘಾತಕಾರಿ ಘಟನೆಯಿಂದ ರಾಜ್ಯದಲ್ಲಿ ಈಗಾಗಲೇ ಕುಸಿದಿರುವ ಅಧಿಕಾರಿಗಳ ಮನೋಬಲವನ್ನ ಮತ್ತಷ್ಟು ಕುಗ್ಗಿಸುವ ಅಪಾಯ ಎದುರಾಗಿದೆ ಎಂದು ಅಶೋಕ್ ಆತಂಕ ವ್ಯಕ್ತಪಡಿಸಿದ್ದಾರೆ.

- Advertisement - 

ಕರ್ನಾಟಕ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರಾಜ್ಯದಲ್ಲಿ “ಜಂಗಲ್ ರಾಜ್” ತಲೆ ಎದ್ದಿದ್ದು, ಪ್ರಾಮಾಣಿಕ ಅಧಿಕಾರಿಗಳಿಗೆ ಉಳಿಗಾಲವಿಲ್ಲ ಎಂಬ ವಾತಾವರಣ ನಿರ್ಮಾಣವಾಗಿದೆ ಎಂದು ಅವರು ತಿಳಿಸಿದರು.

 

Share This Article
error: Content is protected !!
";