15441 ಕೋಟಿ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ- ಸಿದ್ದರಾಮಯ್ಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 65 ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು
ಒಟ್ಟು 15441.17 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು , ಸುಮಾರು 5277 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ತಿಳಿಸಿದರು.

- Advertisement - 

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಇಂದಿನ ಸಭೆಯಲ್ಲಿ   ನಾಲ್ಕು ಹೊಸ/ ವಿಸ್ತರಣಾ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ ಎರಡು ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಸೇರಿದಂತೆ ಅನುಷ್ಠಾನದ ವಿವಿಧ ಹಂತದಲ್ಲಿರುವ ಒಟ್ಟು 10  ತಿದ್ದುಪಡಿ ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

- Advertisement - 

ಮೆ.ಶ್ರೀ ಸಿಮೆಂಟ್ ಲಿಮಿಟೆಡ್ ಸಂಸ್ಥೆಯ 2406 ಕೋಟಿ ರೂ.ಗಳ ಹೊಸ ಬಂಡವಾಳ ಹೂಡಿಕೆಯ ಯೋಜನೆಯಿಂದ 300 ಉದ್ಯೋಗ , ಮೆ. ದಾಲ್ಮಿಯಾ (ಭಾರತ್) ಲಿ. ಸಂಸ್ಥೆ ಯ 3000 ಕೋಟಿ ರೂ.  ಹೂಡಿಕೆಯಿಂದ 570 ಉದ್ಯೋಗ  ಹಾಗೂ ಮೆ. ದಾಲ್ಮಿಯಾ(ಭಾರತ್) ಲಿ. ಸಂಸ್ಥೆ ಯ 3020 ಕೋಟಿ ರೂ. ಹೂಡಿಕೆಯಿಂದ 570 ಉದ್ಯೋಗ ಸೃಷ್ಠಿ, ಮೆ. ಎಂವೀ ಎನರ್ಜಿ ಪ್ರೈ.ಲಿ ಸಂಸ್ಥೆ ಯ 5495 ಕೋಟಿ ರೂ.  ಹೂಡಿಕೆಯಿಂದ 2508 ಉದ್ಯೋಗ ಸೃಷ್ಟಿಯಾಗಲಿದೆ. ನೂತನ ಹೂಡಿಕೆ ಪ್ರಸ್ತಾವನೆಗಳಿಂದ ಒಟ್ಟು 13921 ಕೋಟಿ.ರೂ. ಹೂಡಿಕೆಯಾಗಲಿದ್ದು, 3948 ಉದ್ಯೋಗ  ಸೃಷ್ಟಿಯಾಗಲಿದೆ ಎಂದು ತಿಳಿಸಿದರು.

ಸಭೆಯಲ್ಲಿ ಸಚಿವರಾದ ಎಂ ಬಿ ಪಾಟೀಲ್, ಚೆಲುವರಾಯಸ್ವಾಮಿ ಪ್ರಿಯಾಂಕ ಖರ್ಗೆ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್ ಕೆ ಅತೀಕ್, ವಾಣಿಜ್ಯ ಮತ್ರು ಕೈಗಾರಿಕಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಹಾಜರಿದ್ದರು.

- Advertisement - 

 

 

Share This Article
error: Content is protected !!
";