ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಿಂಗಾಪುರ, ಹಾಂಕಾಂಗ್ ದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು ಕೇಂದ್ರ ಸರ್ಕಾರ ಕೂಡಲೇ ಮುನ್ನೆಚ್ಚರಿಕೆ ಕ್ರಮ ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹ ಮಾಡಿದ್ದಾರೆ.
ಅವರು ಮೈಸೂರಿನ ಕೆ.ಆರ್. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ವಿದೇಶದಿಂದ ಆಗಮಿಸುವವರ ಕೋವಿಡ್ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಯಾವುದೇ ಕ್ರಮ ವಹಿಸದೇ, ಇಲ್ಲಿಯೂ ಕೋವಿಡ್ ಪ್ರಕರಣಗಳು ಹೆಚ್ಚುವ ಸಾಧ್ಯತೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ,
ಕೋವಿಡ್ ಪ್ರಕರಣಗಳಲ್ಲಿ ಏರಿಕೆ ಕಂಡುಬರುತ್ತಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈ ಬಗ್ಗೆ ಎಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ತ್ವರಿತ ನಿರ್ಧಾರಗಳನ್ನು ತೆಗೆದುಕೊಳ್ಳಬೇಕು ಎಂದು ಸಿದ್ದರಾಮಯ್ಯ ತಿಳಿಸಿದರು.