ಡಿಕೆಶಿಯವರ ಸಿಎಂ ಕನಸನ್ನು ಸಿದ್ದರಾಮಯ್ಯ ಕಮರಿಸುವ ಯತ್ನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಒಂದೆಡೆ ಸಿಎಂ ಬಣ, ಇನ್ನೊಂದೆಡೆ ಡಿಕೆಶಿ ಬಣದ ಮೂಲಕ ಕರ್ನಾಟಕ ಕಾಂಗ್ರೆಸ್ ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ನಡೆಸುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಅಧಿಕಾರ ಹಂಚಿಕೆಯ ಒಪ್ಪಂದವಾಗಿತ್ತು ಎಂಬ ಸತ್ಯವನ್ನು ಡಿ.ಕೆ.ಶಿವಕುಮಾರ್ ಅವರು ಇಂದು ಬಹಿರಂಗವಾಗಿ ಹೇಳಿದ್ದಾರೆ.

ಡಿಕೆಶಿಯವರ ಸಿಎಂ ಕುರ್ಚಿ ಕನಸನ್ನು ಸಿದ್ದರಾಮಯ್ಯ ಅವರು ಕಮರಿಸುವ ಯತ್ನವನ್ನು ನಿರಂತರವಾಗಿ ಮಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಕೆಪಿಸಿಸಿ ಅಧ್ಯಕ್ಷರಾಗಿದ್ದರೂ ಡಿಕೆಶಿ ಅವರಿಗೆ ರಾಜ್ಯ ಕಾಂಗ್ರೆಸ್‌ಪಕ್ಷದಲ್ಲಿ ಕವಡೆ ಕಾಸಿನ ಕಿಮ್ಮತ್ತು ಇಲ್ಲದಂತಾಗಿತ್ತು. ಶಾಸಕರನ್ನು ತನ್ನ ಅಂಕೆಯಲ್ಲಿಟ್ಟುಕೊಂಡು ಆಟವಾಡುತ್ತಿರುವ ವಲಸಿಗ ಸಿದ್ದರಾಮಯ್ಯ ಅವರಿಂದ ಡಿಕೆಶಿಯ ಸಿಎಂ ಕುರ್ಚಿ ಕನಸು ಕನಸಾಗಿಯೇ ಉಳಿದಿದೆ.

ಮುಡಾ ಹಗರಣ ನಡೆದರೂ ಸಿದ್ದರಾಮಯ್ಯರನ್ನು ಸಿಎಂ ಗಾದಿಯಿಂದ ಇಳಿಸಲು ಡಿಕೆಶಿಗೆ ಸಾಧ್ಯವಾಗಿಲ್ಲ. ಇದೀಗ ಸಿದ್ದರಾಮಯ್ಯರವರ ಶಕ್ತಿ ಪ್ರದರ್ಶನಕ್ಕೆ ಹೈಕಮಾಂಡ್ ಮೊರೆ ಹೋಗಿ‌ಬ್ರೇಕ್ ಹಾಕಲು ಮುಂದಾಗಿದ್ದಾರೆ ಎಂದು ಬಿಜೆಪಿ ಲೇವಡಿ ಮಾಡಿದೆ.
ಸಿದ್ದು ಮತ್ತು ಡಿಕೆಶಿ ಕುರ್ಚಿ ಕಾಳಗದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಎಂಬುದೇ ಮರೀಚಿಕೆಯಾಗಿದೆ ಎಂದು ಬಿಜೆಪಿ ಕಿಡಿ ಕಾರಿದೆ.

 

- Advertisement -  - Advertisement - 
Share This Article
error: Content is protected !!
";