ಚಂದ್ರವಳ್ಳಿ ನ್ಯೂಸ್, ತುಮಕೂರು:
ತುಮಕೂರಿನ ಮೆಳೇಕೋಟೆಯಲ್ಲಿ ಭಾನುವಾರ ತುಮಕೂರು ಜಿಲ್ಲಾ ಗಾಣಿಗರ ಸಂಘದ ವತಿಯಿಂದ ನಿರ್ಮಿಸಲಾದ ಗಾಣಿಗ ಸಮುದಾಯ ಭವನದ ಉದ್ಘಾಟನಾ ಸಮಾರಂಭದಲ್ಲಿ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಪಾಲ್ಗೊಂಡು ಇತರೆ ಗಣ್ಯರೊಂದಿಗೆ ಸೇರಿ ಸಮುದಾಯ ಭವನ ಲೋಕಾರ್ಪಣೆಗೊಳಿಸಿದರು.
ನಗರೂರಿನ ಶ್ರೀಕ್ಷೇತ್ರ ತೈಲೇಶ್ವರ ಗಾಣಿಗರ ಮಹಾಸಂಸ್ಥಾನ ಮಠ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಪೂರ್ಣಾನಂದಪುರಿ ಮಹಾಸ್ವಾಮೀಜಿ, ತುಮಕೂರಿನ ಚಿಕ್ಕಪೇಟೆಯ ಶ್ರೀಕ್ಷೇತ್ರ ಹಿರೇಮಠದ ಪರಮಪೂಜ್ಯರಾದ ಶ್ರೀ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ತುಮಕೂರಿಮ ಶ್ರೀ ರಾಮಕೃಷ್ಣಾಶ್ರಮದ ಅಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ವೀರೇಶಾನಂದ ಸರಸ್ವತಿ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಗಾಣಿಗರ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಲೋಕೇಶ್, ಮಾಜಿ ಸಚಿವ ಸೊಗಡು ಶಿವಣ್ಣ ಹಾಗೂ ಸಂಘದ ಪದಾಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

