ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ದೊಡ್ಡಬಳ್ಳಾಪುರ ತಾಲ್ಲೋಕಿನ,ತೂಬಗೆರೆ ಹೋಬಳಿ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಚಂಪಾ ಷಷ್ಠಿ ಯ ಪ್ರಯುಕ್ತ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಅಲಂಕಾರ ಹಾಗೂ ಪೂಜಾ ಕಾರ್ಯಕ್ರಮಗಳು ನಡೆಯಿತು.
ನಾಗರಾಧನೆಗೆ ಪ್ರಸಿದ್ದವಾಗಿರುವ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿ ಯ ಅಂಗವಾಗಿ ಬೆಳಿಗ್ಗೆ ಅಭಿಷೇಕ ಹಾಗೂ ಮಹಾಮಂಗಳಾರತಿ ಪ್ರಸಾದ ವಿನಿಯೋಗ ನಡೆಸಲಾಗಿತ್ತು. ಭಕ್ತರು ನಾಗರ ಕಲ್ಲುಗಳಿಗೆ ಪೂಜೆ ಸಲ್ಲಿಸಿದರು.
ಸುಬ್ರಹ್ಮಣ್ಯ ದೇಗುಲದಲ್ಲಿ ವಿಶೇಷ ಪೂಜೆಗಳು ನಡೆದವು ಚಂಪಾ ಷಷ್ಠಿಯಂದು ಸರ್ಪಾಕಾರದ ನಾಗರ ವಿಗ್ರಹಕ್ಕೆ ಪೂಜೆ ಸಲ್ಲಿಸಿದರೆ ಸರ್ಪದೋಷ ಪರಿಹಾರ ವಾಗುತ್ತದೆ ಎಂಬುದು ಜನರ ನಂಬಿಕೆ ಆದ್ದರಿಂದ ನಾಗರ ವಿಗ್ರಹವನ್ನಿಟ್ಟು ಸುಬ್ರಹ್ಮಣ್ಯ ಸ್ವಾಮಿಯನ್ನು ಆವಾಹನೆ ಮಾಡಿ ಹಾಲೆರೆದು ಅಭಿಷೇಕ ಮಾಡಿ ನೈವೇದ್ಯ ಅರ್ಪಿಸಿ ಉಪವಾಸ ವ್ರತ ಆಚರಿಸುವ ಪದ್ಧತಿಯಿದೆ.
ಕ್ಷೇತ್ರಕ್ಕೆ ಬಂದ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆಯನ್ನು ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ದೇವಾಲಯದ ಕಾರ್ಯನಿರ್ಹಾಧಿಕಾರಿ ಎಂ. ನಾರಾಯಣಸ್ವಾಮಿ ಪ್ರಧಾನ ಅರ್ಚಕರು ಆರ್. ಸುಬ್ರಹ್ಮಣ್ಯ ಹಾಗೂ ದೇವಾಲಯದ ಸಿಬ್ಬಂದಿ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.