ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಹಿರಿಯೂರು ನಗರದ ಮೈಸೂರು ರಸ್ತೆಯಲ್ಲಿರುವ ಬಾಪೂಜಿ ವಿದ್ಯಾ ಸಂಸ್ಥೆಯ ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ಕೂಲ್ ಆಫ್ ನರ್ಸಿಂಗ್ ಮತ್ತು ಬಾಪೂಜಿ ಪ್ಯಾರಾ ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳಿಂದ ಬಾಪೂಜಿ ಉತ್ಸವ ಹಾಗೂ ಪ್ರಥಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಸ್ವೀಕಾರ ಸಮಾರಂಭ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸಿದರು.
ನಂತರ ಮಾತನಾಡಿದ ಸಚಿವರು ಕೆಲವೊಂದು ವಿದ್ಯಾ ಸಂಸ್ಥೆಗಳು ಹಣ ಮಾಡಲಿಕ್ಕೆ ಇರುತ್ತವೆ. ಆದರೆ ಈ ಸಂಸ್ಥೆಯ ಸಂಸ್ಥಾಪಕರಾದ ಜಿಎಸ್ ಮಂಜುನಾಥ್ ರವರು ಬಡ ವಿದ್ಯಾರ್ಥಿಗಳಿಗೆ ಮತ್ತು ಬಡ ಕುಟುಂಬದವರಿಗೆ ಅನುಕೂಲ ಆಗುವ ರೀತಿಯಲ್ಲಿ ಶುಲ್ಕ ಪಾವತಿಸಿಕೊಂಡು ಶಾಲೆ ನೆಡೆಸುತ್ತಾರೆ ಎಂದು ಶ್ಲಾಘೀಸಿದರು.
ಸಂಸ್ಥಾಪಕರು ನೀಡಿರುವ ಒಳ್ಳೆಯ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗ ಪಡಿಸಿಕೊಂಡು ಮುಂದಿನ ಭವಿಷ್ಯ ರೂಪಿಸಿಕೊಂಡು ನಿಮ್ಮ ಸೇವೆಗಳನ್ನು ನಿಷ್ಕಲ್ಮಶವಾಗಿ ಮಾಡಿ ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ಸಂಸ್ಥೆಯ ಸಂಸ್ಥಾಪಕ ಹಾಗೂ ಕರ್ನಾಟಕ ಸರ್ಕಾರದ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಿಎಸ್ ಮಂಜುನಾಥ್ ಅವರು ಮಾತನಾಡಿ ವೈದ್ಯರಿಗಿಂತ ನರ್ಸ್ ಗಳ ಸೇವೆ ಅತ್ಯಮೂಲ್ಯವಾದ ಸೇವೆ. ವೈದ್ಯರು ನಿಮಗೆ ಮಾರ್ಗದರ್ಶಕರಾಗಿರುತ್ತಾರೆ. ನೀವು ಅವರ ಮಾರ್ಗದರ್ಶನದಲ್ಲಿ ರೋಗಿಗಳಿಗೆ ಹತ್ತಿರವಾಗಿ ಸೇವೆ ಸಲ್ಲಿಸುತ್ತೀರಾ. ನಿಮ್ಮ ಸೇವೆ ಅತ್ಯಮೂಲ್ಯವಾದದ್ದು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
ಆಡಳಿತ ವೈದ್ಯಾಧಿಕಾರಿ ಡಾ.ನಿರಂಜನ್ ಮೂರ್ತಿ.ಬಿ.ಹೆಚ್ ಮಾತನಾಡಿ ಪ್ರಥಮ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳಿಗೆ ವೃತ್ತಿ ಸೇವೆಯ ವೃತ್ತಿನಿಷ್ಠೆಯ ವೃತ್ತಿ ಬದ್ಧತೆಯ ಪ್ರಮಾಣವಚನ ಬೋಧನೆ ಮಾಡಿದರು.
ನಗರಸಭೆ ಉಪಾಧ್ಯಕ್ಷೆ ಮಂಜುಳಾ.ಹೆಚ್, ನಗರಸಭೆ ಸದಸ್ಯ ಈರಲಿಂಗೇಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ವೀಣಾ ಮಂಜುನಾಥ್, ಆಡಳಿತಾಧಿಕಾರಿ ಆರ್ ಮಂಜುನಾಥ್ ವೇದಿಕೆಯಲ್ಲಿ ಇದ್ದರು.
ಸಂಸ್ಥೆಯ ವಾರ್ಷಿಕ ವರದಿಯನ್ನು ಉಪನ್ಯಾಸಕಿ ಪಲ್ಲವಿ ಎಂ ಓದಿದರು. ವಿದ್ಯಾರ್ಥಿನಿ ಚಂದನ ಆರ್ ಪ್ರಾರ್ಥಿಸಿದರು. ಉಪನ್ಯಾಸಕಿ ಸುನಂದ ಸ್ವಾಗತಿಸಿದರು. ಸೌಂದರ್ಯ ಆರ್ ವಂದಿಸಿದರು. ಶಕೀಬ್ ಎಸ್ ನಿರೂಪಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕರಾದ ಡಾ.ನೇತನ್ ಜಿ.ಎಂ, ವ್ಯವಸ್ಥಾಪಕ ಧನಂಜಯ.ಜಿ ಉಪಸ್ಥಿತರಿದ್ದರು.