ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ಮಾಧ್ಯಮ ಅಕಾಡೆಮಿ ಸೆಪ್ಟೆಂಬರ್-03ರಂದು ಗಾಂಧಿ ಭವನದಲ್ಲಿ ಬೆಳಗ್ಗೆ 11 ಗಂಟೆಗೆ ಸುಳ್ಳು ಸುದ್ದಿ –ಸಾಮಾಜಿಕ ನ್ಯಾಯದ ಮೇಲೆ ಪರಿಣಾಮ ಎನ್ನುವ ವಿಚಾರ ಸಂಕಿರಣವನ್ನು ಹಮ್ಮಿಕೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಚಾರ ಸಂಕಿರಣ ಉದ್ಘಾಟಿಸಬೇಕಿದ್ದು ಪರಿಷ್ಕೃತ ವೇಳಾಪಟ್ಟಿಯಂತೆ ಅವರು ವಿಚಾರ ಸಂಕಿರಣದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರು ವಿಚಾರ ಸಂಕಿರಣ ಉದ್ಘಾಟಿಸಲಿದ್ದಾರೆ . ಎನ್ ಡಿಟಿವಿ ನಿಕಟಪೂರ್ವ ಗ್ರೂಪ್ ಎಡಿಟರ್ ಶ್ರೀನಿವಾಸನ್ ಜೈನ್ ಪ್ರಧಾನ ಭಾಷಣ ಮಾಡಲಿದ್ದಾರೆ. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಶಾ ಖಾನಂ ಅಧ್ಯಕ್ಷತೆ ವಹಿಸಿಲಿದ್ದಾರೆ.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ. ವಿ. ಪ್ರಭಾಕರ್, ನಾಗಮಣಿ ಎಸ್ ರಾವ್, ಪ್ರೊಫೆಸರ್ ಬಿ.ಕೆ. ರವಿ, ಮುಖ್ಯಮಂತ್ರಿಗಳ ಹಾಗೂ ವಾರ್ತಾ ಇಲಾಖೆ ಕಾರ್ಯದರ್ಶಿ ಡಾ. ಕೆ. ವಿ. ತ್ರಿಲೋಕ ಚಂದ್ರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಉಪಸ್ಥಿತರಿರುತ್ತಾರೆ. ಹನ್ನೆರಡು ಮೂವತ್ತರಿಂದ ನಡೆಯುವ ಸಂವಾದ ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ದಿನೇಶ್ ಅಮೀನಮಟ್ಟು, ಕರ್ನಾಟಕ ಮಾಧ್ಯಮ ಅಕಾಡೆಮಿ ಮಾಜಿ ಅಧ್ಯಕ್ಷ ಎಂ ಸಿದ್ದರಾಜು, ಹಿರಿಯ ಪತ್ರಕರ್ತರಾದ ಆಶಾ ಕೃಷ್ಣಸ್ವಾಮಿ, ಪ್ರಜಾವಾಣಿ ದಿನಪತ್ರಿಕೆ ಕಾರ್ಯ ನಿರ್ವಾಹಕ ಸಂಪಾದಕ ರವೀಂದ್ರ ಭಟ್ ಐನಕೈ, ಹಿರಿಯ ಪತ್ರಕರ್ತ ಸುಭಾಷ್ ಹೂಗಾರ್ ಅವರು ಭಾಗವಹಿಸಲಿದ್ದಾರೆ. ಕಾರ್ಯಕ್ರಮವನ್ನು ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್ ರಾಜಕೀಯ ಸಂಪಾದಕ ಬನ್ಸಿ ಕಾಳಪ್ಪ ನಿರ್ವಹಿಸಲಿದ್ದಾರೆ.
ಮಧ್ಯಾಹ್ನ 2:30ಕ್ಕೆ, ಗೂಗಲ್ ಟೀಮ್ ನೊಂದಿಗೆ ಸಂವಾದ ಕಾರ್ಯಕ್ರಮವಿದ್ದು ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಇಲ್ಲಿನ ಹ್ಯುಮಾನಿಟೀಸ್ ಮತ್ತು ಸೋಶಿಯಲ್ ಸೈನ್ಸಸ್ ಮುಖ್ಯಸ್ಥೆ ಶಿಲ್ಪಾ ಕಲ್ಯಾಣ್ ನಡೆಸಿಕೊಡಲಿದ್ದಾರೆ. ಅವರೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಿನಿಮಾ ಮತ್ತು ಛಾಯಾಚಿತ್ರ ನಿವೃತ್ತ ಅಧಿಕಾರಿ ಟಿ. ಕೆಂಪಣ್ಣ ಭಾಗವಹಿಸಲಿದ್ದಾರೆ ಎಂದು ಅಕಾಡೆಮಿ ಪ್ರಕಟಣೆ ತಿಳಿಸಿದೆ.