ಕರ್ನಲ್ ಸೋಫಿಯಾ ಖುರೇಷಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ ಸಚಿವರ ವಿರುದ್ಧ ಕ್ರಮ ಜರುಗಿಸಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಲ್ ಸೋಫಿಯಾ ಖುರೇಷಿ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಮಧ್ಯಪ್ರದೇಶ ಬಿಜೆಪಿ ನಾಯಕ ಹಾಗೂ ಸಚಿವ ವಿಜಯ್ ಶಾ ವಿರುದ್ಧ ಬಿಜೆಪಿಯು ತಕ್ಷಣವೇ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧ್ಯಕ್ಷ ಸೈಯದ್ ಖುದ್ದುಸ್ ಸೇರಿದಂತೆ ಮತ್ತಿತರ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ.

- Advertisement - 

ಸೇನೆಯ ಅಧಿಕಾರಿಯ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಸಚಿವರ ವಿರುದ್ಧ ಕೇವಲ ಎಫ್‌ಐಆರ್ ಅಷ್ಟೇ ಅಲ್ಲ, ಸರಿಯಾದ ಶಿಕ್ಷೆಯಾಗಬೇಕು ಎಂದು ದೇಶದ ಜನರು ಕಾಯುತ್ತಿದ್ದಾರೆ.

- Advertisement - 

ಆಪರೇಷನ್ ಸಿಂಧೂರಕುರಿತು ಜಗತ್ತಿಗೆ ತಿಳಿಸಿದ ಮುಸ್ಲಿಂ ಸಮುದಾಯದ ಮಹಿಳಾ ಸೇನಾಧಿಕಾರಿಯ ಕುರಿತು ವೈಯಕ್ತಿಕ ತೇಜೋವಧೆ ಮಾಡುವುದು ಸರಿಯಲ್ಲ‌.

 ಬಿಜೆಪಿ ಸಚಿವ ವಿಜಯ್ ಶಾ ಹೇಳಿಕೆಯು, ಸೇನೆಯ ಶೌರ್ಯಕ್ಕೆ ನಾವು ಮಾಡುವ ಅವಮಾನ ಎಂದು ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಜಿಲ್ಲಾಧ್ಯಕ್ಷ ಸೈಯದ್ ಖುದ್ದುಸ್ ರವರು ಚಿತ್ರದುರ್ಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

- Advertisement - 

 ಈ ಸಂದರ್ಭದಲ್ಲಿ ಬೀದಿ ಬದಿ ಅಧ್ಯಕ್ಷ ಸಮಿಉಲ್ಲಾ, ಜಿಲ್ಲಾ ಕಾಂಗ್ರೆಸ್ ಎಸ್ ಟಿ ವಿಭಾಗದ ಅಧ್ಯಕ್ಷ ಮಂಜುನಾಥ್, ಜಿಲ್ಲಾ ಅಲ್ಪಸಂಖ್ಯಾತರ ಪ್ರಧಾನ ಕಾರ್ಯದರ್ಶಿ ಇರ್ಫಾನ್ ಮುಲ್ಲಾ, ಸಲ್ಮಾನ್, ದಾದಾಪೀರ್ ಇನ್ನು ಅನೇಕ ಮುಖಂಡರು ಭಾಗಿಯಾಗಿದ್ದರು.

 

Share This Article
error: Content is protected !!
";