ಅಂಧ ಮುಖ್ಯಮಂತ್ರಿ, ಅಂಧ ರಾಜ್ಯ

News Desk

 ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಐಪಿಎಲ್ ಕಪ್ ಗೆದ್ದಿದ್ದು ಆರ್​ಸಿಬಿ ತಂಡ. ಸಂಭ್ರಮಾಚರಣೆಯಲ್ಲಿ ಫೋಟೋಗೆ ಪೋಸ್ ಕೊಟ್ಟಿದ್ದು ಕೆಪಿಸಿಸಿ ತಂಡ. ಅಂಧ ಮುಖ್ಯಮಂತ್ರಿ, ಅಂಧ ರಾಜ್ಯ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದರು.

- Advertisement - 

ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, ಈ ದುರ್ಘಟನೆಯ ಕ್ರಿಕೆಟ್ ಪಂದ್ಯದಲ್ಲಿ ಸಿಎಂ ಸಿದ್ದರಾಮಯ್ಯ ಬ್ಯಾಟರ್, ಡಿಸಿಎಂ ಡಿಕೆ ಶಿವಕುಮಾರ​ ಬೌಲರ್. ಹೇಗಾದರೂ ಮಾಡಿ ಸಿದ್ದರಾಮಯ್ಯರನ್ನು ರನೌಟ್ ಮಾಡಿಸಬೇಕು ಎಂಬುದು ಡಿಕೆಶಿ ಆಶೆ. ಆದರೆ ಹಿಟ್ ವಿಕೆಟ್ ಆಗಿದ್ದು ರಾಜ್ಯದ ಜನರು ಎಂದು ಅಶೋಕ್ ವಾಗ್ದಾಳಿ ಮಾಡಿದರು.

- Advertisement - 

ಇಡೀ ದುರ್ಘಟನೆಯಲ್ಲಿ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ ಹಾಗೂ ಆರ್​ಸಿಬಿ ತಂಡದ್ದು ತಪ್ಪಿಲ್ಲ. ಸರ್ಕಾರ ನಡೆಸುತ್ತಿರುವ ಸಿಎಂ, ಡಿಸಿಎಂ, ಗೃಹ ಸಚಿವರು ಆರೋಪಿ ಸ್ಥಾನದಲ್ಲಿದ್ದಾರೆ, ಘಟನೆಯನ್ನು ಜಿಲ್ಲಾಧಿಕಾರಿಗಳು, ನಿವೃತ್ತ ನ್ಯಾಯಾಧೀಶರು ಅಥವಾ ಸಿಐಡಿಯಿಂದ ತನಿಖೆ ನಡೆಸಲು ಸಾಧ್ಯವಿಲ್ಲ. ಹಾಲಿ ಅಥವಾ ಮುಖ್ಯ ನ್ಯಾಯಾಧೀಶರಿಂದ ತನಿಖೆ ನಡೆಸಬೇಕು ಎಂದು ಅಶೋಕ್ ಆಗ್ರಹ ಮಾಡಿದರು.

ಸಿಎಂ, ಡಿಸಿಎಂ, ಗೃಹ ಸಚಿವರು ಆರೋಪಿಗಳು-
ಐಪಿಎಲ್ ಕಪ್ ವಿಜಯಾಚರಣೆ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಲುಕಿ 11 ಮಂದಿ ಸಾವನ್ನಪ್ಪಿದ ಘಟನೆಯಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಹಾಗೂ ಗೃಹ ಸಚಿವ ಪರಮೇಶ್ವರ ಪ್ರಮುಖ ಆರೋಪಿಗಳಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆರೋಪಿಸಿದರು.

- Advertisement - 

ಕಾರ್ಯಕ್ರಮಕ್ಕೆ ಅನುಮತಿ ಇರಲಿಲ್ಲ ಎನ್ನುತ್ತಾರೆ. ಹಾಗಾದರೆ, ಡಿಸಿಎಂ ಡಿಕೆ ಶಿವಕುಮಾರ್ ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗಿ ಟ್ರೋಫಿಗೆ ಮುತ್ತಿಕ್ಕಿ ಫೋಟೋಗೆ ಪೋಸ್ ಕೊಟ್ಟಿದ್ದು ಏಕೆ ಎಂದು ಖಾರವಾಗಿ ಪ್ರಶ್ನಿಸಿದರು.

ಆರ್‌ಸಿಬಿ, ಡಿಎನ್‌ಎ ನಿರ್ವಹಣೆ ಮತ್ತು ಕೆಎಸ್‌ಸಿಎ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಆದರೆ ಅದು ಎ1 ಆಗಿ ಸಿಎಂ, ಡಿವೈಸಿಎಂ 2 ಆಗಿ ಮತ್ತು ಗೃಹ ಸಚಿವರು ಎ3 ಆಗಿ ಇರಬೇಕಿತ್ತು, ನೈತಿಕತೆ ಆಧಾರದ ಮೇಲೆ ಸಿಎಂ ಮತ್ತು ಡಿಸಿಎಂ ರಾಜೀನಾಮೆ ನೀಡಬೇಕು ಎಂದು ವಿಜಯೇಂದ್ರ ಆಗ್ರಹ ಮಾಡಿದರು.

 

Share This Article
error: Content is protected !!
";