ನಂದಿಬೆಟ್ಟದಲ್ಲಿ ಜೂನ್ 19 ರಂದು ಸಚಿವ ಸಂಪುಟ ಸಭೆ, ಸ್ಥಳ ಪರಿಶೀಲನೆ

News Desk

ಚಂದ್ರವಳ್ಳಿ ನ್ಯೂಸ್, ಚಿಕ್ಕಬಳ್ಳಾಪುರ:
ಕೋಲಾರ
, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ನಂದಿಬೆಟ್ಟದಲ್ಲಿ ಜೂನ್ 19 ರಂದು ಸಚಿವ ಸಂಪುಟದ ಸಭೆ ನಡೆಯಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ನಡೆಯುತ್ತಿದೆ. ಸ್ಥಳೀಯ ಶಾಸಕ ಪ್ರದೀಪ್ ಈಶ್ವರ್ ಮತ್ತು ಜಿಲ್ಲಾಧಿಕಾರಿಗಳ ನೇತೃತ್ವದ ತಂಡ ಪರಿಶೀಲನೆ ನಡೆಸಿತು.

- Advertisement - 

ಚಿಕ್ಕಬಳ್ಳಾಪುರ ಜಿಲ್ಲೆಯ ಪ್ರವಾಸಿಗರ ಮೆಚ್ಚಿನ ತಾಣವಾದ ನಂದಿಬೆಟ್ಟದಲ್ಲಿ ಸಚಿವ ಸಂಪುಟದ ಸಭೆ ಎಲ್ಲರ ಗಮನ ಸಳೆದಿದೆ. ಬೆಟ್ಟದಲ್ಲಿನ ಪ್ರವಾಸೋದ್ಯಮ ಇಲಾಖೆಯ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತ ಮಯೂರ ಪೈನ್ ಟಾಪ್ ರೆಸ್ಟೋರೆಂಟ್​ನಲ್ಲಿ ಸಭೆ ನಡೆಯಲಿದ್ದು, ಮೂಲಭೂತ ಸೌಕರ್ಯಗಳನ್ನು ಅಳವಡಿಸುವ ಕಾರ್ಯ ಭರದಿಂದ ನಡೆಯುತ್ತಿದೆ.

- Advertisement - 

ಶಾಸಕ ಪ್ರದೀಶ್ ಈಶ್ವರ್ ಮಾತನಾಡಿ, ಸಚಿವ ಸಂಪುಟ ಸಭೆ ಇಲ್ಲಿ ನಡೆಯುತ್ತಿರುವುದಕ್ಕೆ ಮುಖ್ಯಮಂತ್ರಿಗಳನ್ನು ಮನವೊಲೈಸುವಲ್ಲಿ ನಾವುಗಳು ಯಶಸ್ವಿಯಾಗಿದ್ದೇವೆ.
ಕೋಲಾರ
, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಹೆಚ್ಚಿನ ಅನುದಾನ ಬರುವ ಸಾಧ್ಯತೆ ದಟ್ಟವಾಗಿದೆ.
150 ಕೋಟಿ ಹೂವಿನ ಮಾರುಕಟ್ಟೆಗೆ
, ಜಕ್ಕಲಮಡಗು ಡ್ಯಾಂ ಕಟ್ಟಡ ಎತ್ತರಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸಚಿವ ಸಂಪುಟದ ಮೂಂದಿಡಲಾಗುತ್ತದೆ ಎಂದರು.

ಜೂನ್ 19 ರಂದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮತ್ತಿತರರು ಸಂಪುಟ ಸಭೆ ಆರಂಭಕ್ಕೂ ಮುನ್ನ ಭೋಗನಂದಿಶ್ವರ ದೇವಸ್ಥಾನಕ್ಕೆ ಭೇಟಿ,  ನಂದಿಬೆಟ್ಟದಲ್ಲಿ ಸಚಿವರ ಫೋಟೋ ಸೇಷನ್ ನಂತರ ಸಚಿವ ಸಂಪುಟ ಸಭೆ ನಡೆಯಲಿದೆ.

- Advertisement - 

ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿ ಗಿರಿಧಾಮದಲ್ಲಿ ಜೂ.19 ರಂದು ಸಚಿವ ಸಂಪುಟ ಸಭೆ ಏರ್ಪಡಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪರವರು ಅಧಿಕಾರಗಳೊಂದಿಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪ್ರಾತಿನಿಧ್ಯ ಕಲ್ಪಿಸುವ ಸಂಬಂಧ ಸಭೆ ನಡೆಸಿದರು.

ಸಚಿವ ಕೆ.ಹೆಚ್. ಮುನಿಯಪ್ಪ ಮಾತನಾಡಿ, ಈ ಮೂರು ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ಕಾವೇರಿ ನೀರು ಪೂರೈಕೆ, ಮೆಟ್ರೋ, ಎಸ್​ಟಿಪಿ ಮತ್ತು ಯುಜಿಡಿ ಕಾಮಗಾರಿಗೆ ಅನುದಾನ, ಜಿಲ್ಲಾಸ್ಪತ್ರೆಗೆ ಅನುದಾನ, ರಸ್ತೆಗಳ ಅಭಿವೃದ್ಧಿ, ಕೆರೆಗಳ ಪುನಶ್ಚೇತನ, ಜಿಲ್ಲಾ ಕೌಶಲ್ಯ ತರಬೇತಿ ಕೇಂದ್ರ ಸ್ಥಾಪನೆ, ಬ್ಲಡ್ ಬ್ಯಾಂಕ್, ರೇಷ್ಮೆ ಸೀರೆ ಮಾರ್ಕೆಟಿಂಗ್ ಕಾಂಪ್ಲೆಕ್ಸ್ ಸ್ಥಾಪಿಸಲು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವರು ತಿಳಿಸಿದರು.

ದೇವನಹಳ್ಳಿ ತಾಲೂಕಿನ ವಿಜಯಪುರವನ್ನು ತಾಲೂಕು ಕೇಂದ್ರ, ದೇವನಹಳ್ಳಿ ಪುರಸಭೆಯನ್ನು ನಗರಸಭೆಗೆ ಮೇಲ್ದರ್ಜೆಗೇರಿಸಲು, ಮೆಡಿಕಲ್, ಇಂಜಿನಿಯರಿಂಗ್, ಪ್ಯಾರಾ ಮೆಡಿಕಲ್ ಕಾಲೇಜು, ಟ್ರಾಮಾ ಕೇರ್ ಸೆಂಟರ್, ಎತ್ತಿನ ಹೊಳೆ ಯೋಜನೆ ಸೇರಿದಂತೆ ಕೃಷಿ, ಕೈಗಾರಿಕೆ, ಮಾಹಿತಿ ತಂತ್ರಜ್ಞಾನ ಕುರಿತು ಸಭೆಯಲ್ಲಿ ಚರ್ಚೆ ನಡೆಸುವುದಾಗಿ ತಿಳಿಸಿದರು.

ಹೊಸಕೋಟೆ ಶಾಸಕರು ಹಾಗೂ ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ ಮಾತನಾಡಿ, ಮುಂದಿನ ನಾಲ್ಕು ತಾಲೂಕುಗಳಲ್ಲಿ ರಿಂಗ್ ರೋಡ್ ನಿರ್ಮಿಸಿದಲ್ಲಿ ಟ್ರಾಫಿಕ್ ಸಮಸ್ಯೆ ಕಡಿಮೆ ಮಾಡಬಹುದು. ದೇವನಹಳ್ಳಿಯಿಂದ ಮಾಸ್ತಿವರೆಗೆ ರಸ್ತೆ ಅಭಿವೃದ್ಧಿಪಡಿಸಿದಲ್ಲಿ ಕೈಗಾರಿಕೆ ಪ್ರದೇಶಗಳಿಗೆ ಸಂಪರ್ಕ ಕಲ್ಪಿಸಬಹುದು. ಕೈಗಾರಿಕಾ ಪ್ರದೇಶದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನ, ಕೃಷಿ ಕಾಲೇಜು ಸ್ಥಾಪನೆ ಮಾಡಿದರೆ ಅನುಕೂಲವಾಗಲಿದೆ. ನಗರ ಪ್ರದೇಶಗಳಿಗೆ ಹೆಚ್ಚಿನ ಅನುದಾನ ಬಿಡುಗಡೆಗೆ ಸಿಎಂ-ಡಿಸಿಎಂ ಬಳಿ ಒತ್ತಾಯಿಸಲಾಗುತ್ತದೆ ಎಂದರು.

ನೆಲಮಂಗಲ ಶಾಸಕ ಶ್ರೀನಿವಾಸ್ ಮಾತನಾಡಿ, ನೆಲಮಂಗಲದಲ್ಲಿ ಸರ್ಕಾರಿ ಡಿಪ್ಲೋಮಾ ಕಾಲೇಜು ಸ್ಥಾಪನೆ, ಶಿವಗಂಗೆ ಅಭಿವೃದ್ಧಿ ಪ್ರಾಧಿಕಾರ, ಭೂಗತ ಕೇಬಲ್ ಅಳವಡಿಕೆಗೆ ಅನುದಾನ, ರಸ್ತೆ ಅಭಿವೃದ್ಧಿ, ನೆಲಮಂಗಲದ ತ್ಯಾಮಗೊಂಡ್ಲು, ಹೊಸಕೋಟೆಯ ಸಮೇತನಹಳ್ಳಿ ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸಲು ಮನವಿ ಮಾಡಲಾಗುತ್ತದೆ ಎಂದರು.

ದೊಡ್ಡಬಳ್ಳಾಪುರ ಕ್ಷೇತ್ರದ ಬಿಜೆಪಿ ಶಾಸಕ ಧೀರಜ್ ಮುನಿರಾಜು, ಪ್ರವಾಸಿ ತಾಣದಲ್ಲಿ ಎಲ್ಲಾ ಸಚಿವರು ಜಾಲಿಯಾಗಿ ಸಚಿವ ಸಂಪುಟ ಸಭೆ ಮಾಡುತ್ತಿದ್ದಾರೆ. ಕ್ಷೇತ್ರದ ಪಕ್ಕದಲ್ಲಿರುವ ನಂದಿಬೆಟ್ಟಕ್ಕೆ ಸಚಿವರು ಬಂದು ಹೋಗುತ್ತಿರುವುದು ಸಂತೋಷ. ಎಂ.ಸಿ.ಸುಧಾಕರ್, ಕೆ.ಹೆಚ್. ಮುನಿಯಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಮುಖ್ಯಮಂತ್ರಿಗಳು ಒಂದು ದಿನ ನಂದಿಬೆಟ್ಟದಲ್ಲಿ ತಂಗುವ ಮೂಲಕ ನಂದಿಬೆಟ್ಟಕ್ಕೆ ವಿಶೇಷ ಪ್ಯಾಕೇಜ್ ನೀಡಲಿ. ಕಳೆದ ಬಾರಿ ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟದಲ್ಲಿ ದೊಡ್ಡಬಳ್ಳಾಪುರದಲ್ಲಿ ಬಿಬಿಎಂಪಿ ಕಸ ಸುರಿಯುವುದಕ್ಕೆ ತೀರ್ಮಾನ ಮಾಡಲಾಗಿತ್ತು. ಈಗ ನಂದಿಬೆಟ್ಟದ ಸಚಿವ ಸಂಪುಟ ಸಭೆಯಲ್ಲಿ ಮತ್ತೆಲ್ಲಿ ಕಸ ಸುರಿಯುವುದಕ್ಕೆ ತೀರ್ಮಾನ ಮಾಡುತ್ತಾರೆಂಬ ಭಯ ಇದೆ ಎಂದರು.

ನಂದಿಬೆಟ್ಟದಲ್ಲಿ ಜೂ-19ರಂದು ಸಚಿವ ಸಂಪುಟ ಸಭೆ ಹಿನ್ನೆಲೆಯಲ್ಲಿ ಜೂನ್​ 20 ರ ಬೆಳಿಗ್ಗೆ 5 ಗಂಟೆಯವರೆಗೆ ಪ್ರವಾಸಿಗರು ಮತ್ತು ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಜೂನ್​ ದಿನಾಂಕ 17 ದಿಂದ 19ರ ವರೆಗೆ ಬೆಟ್ಟದ ಮೇಲಿನ ವಸತಿ ಕೊಠಡಿಗಳನ್ನು ಕಾಯ್ದಿರಿಸುವಿಕೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article
error: Content is protected !!
";