ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ವಿಧಾನಸೌಧ ಮೆಟ್ಟಿಲು ಮೇಲೆ ಸರ್ಕಾರ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ! ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ ಜನ ಸತ್ತಿದ್ದಾರೆ!! ಇದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೇಳಿಕೆ ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ವ್ಯಂಗ್ಯವಾಡಿದ್ದಾರೆ.
ಸಿದ್ದರಾಮಯ್ಯನವರೇ.. ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ!? ದಯವಿಟ್ಟು ಹೇಳುವಿರಾ? ಕುಮಾರಸ್ವಾಮಿ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.
ದುರಂತದ ಹೊಣೆಯನ್ನು ಪೊಲೀಸರ ಮೇಲಷ್ಟೇ ಎತ್ತಿಹಾಕಿ ‘ಕೈ‘ ತೊಳೆದುಕೊಳ್ಳುವುದು ಎಷ್ಟು ಸರಿ? ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ? ಮೆಟ್ಟಿಲು ಮುಖ್ಯಮಂತ್ರಿ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.