ನಬಾರ್ಡ್‌ನ ಕೃಷಿ ಸಾಲ ಹೆಚ್ಚಿಸಲು ಕೇಂದ್ರ ಹಣಕಾಸು ಸಚಿವೆಗೆ ಮನವಿ ಮಾಡಿದ ಸಿಎಂ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ‌ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ನಬಾರ್ಡ್‌ನ ಕೃಷಿ ಸಾಲವನ್ನು ಶೇ.58 ಕಡಿತ ಮಾಡಿರುವುದರಿಂದ ರಾಜ್ಯದ ರೈತರಿಗೆ ಬಹುದೊಡ್ಡ ಸಂಕಷ್ಟ ಎದುರಾಗಿದೆ,

ಹಾಗಾಗಿ ಈ ಸಾಲದ ಮಿತಿಯನ್ನು ಹೆಚ್ಚಿಸಿ ರೈತರ ಹಿತಕಾಯುವಂತೆ ಮನವಿ ಮಾಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಕೇಂದ್ರ ಸರ್ಕಾರದ ಹಣಕಾಸು ಮಂತ್ರಿಗಳಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿ ಮಾಡಿ  ನಬಾರ್ಡ್ ನೆರವು ಕಡಿತಗೊಳಿಸದಂತೆ ಮನವಿ ಮಾಡಿದರು.

ಕಳೆದ ಸಾಲಿನಲ್ಲಿ  ನಬಾರ್ಡ್ ನೆರವು 5400 ಕೋಟಿ ರೂಪಾಯಿಗಳಷ್ಟಿದ್ದು, ಈ ಬಾರಿ  2400 ಕೋಟಿ ರೂಗಳಿಗೆ ಕಡಿತಗೊಳಿಸಲಾಗಿದೆ. ಈ ಕುರಿತು ನಿರ್ಮಲಾ ಸೀತಾರಾಮನ್ ಅವರ ಗಮನ ಸೆಳೆದ ಮುಖ್ಯಮಂತ್ರಿಗಳು ಈ ವ್ಯತ್ಯಾಸ ಸರಿಪಡಿಸಲು ಕೋರಿದರು.

 ಈ ನಿಯೋಗದಲ್ಲಿ  ಸಚಿವರಾದ ಬೈರತಿ ಸುರೇಶ್, ಚೆಲುವರಾಯಸ್ವಾಮಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಹಾಗೂ ಶಾಸಕರು ಉಪಸ್ಥಿತರಿದ್ದರು.

 

 

- Advertisement -  - Advertisement - 
Share This Article
error: Content is protected !!
";