ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಗ್ಯಾರಂಟಿಗಳನ್ನು ನೀಡಲು “ಕೈ”ಲಾಗದ ಕರ್ನಾಟಕ ಕಾಂಗ್ರೆಸ್ ಸರ್ಕಾರ, ಈಗ ಬಡವರ ಬಿಪಿಎಲ್‌ರದ್ದು ಎಂಬ ಹೊಸ ರಾಗ ತೆಗೆದಿದೆ ಎಂದು ಬಿಜೆಪಿ ಸರ್ಕಾರದ ನಡೆಯನ್ನು ಟೀಕಿಸಿದೆ.
ಚುನಾವಣೆಗೂ ಮುನ್ನ ಗ್ಯಾರಂಟಿಗಳಿಗೆ ಯಾವುದೇ ಷರತ್ತುಗಳಿಲ್ಲ ಎಂದು ಸುಳ್ಳಾಡಿದ್ದ ಕಾಂಗ್ರೆಸ್ಸಿಗರು, ಅಧಿಕಾರಕ್ಕೆ ಬಂದ ನಂತರ ಷರತ್ತುಗಳ ಮೇಲೆ ಷರತ್ತುಗಳನ್ನು ವಿಧಿಸಿದ್ದರು.
ಈಗ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನು ಕಡಿತಗೊಳಿಸಲು ಬಡವರ ಬಿಪಿಎಲ್‌ಕಾರ್ಡ್‌ಗಳನ್ನು ರದ್ದುಗೊಳಿಸುತ್ತಿರುವುದು ಅತ್ಯಂತ ಅಮಾನವೀಯ ಹಾಗೂ ಖಂಡನೀಯ.
ಸಿಎಂ ಸಿದ್ದರಾಮಯ್ಯ ಅವರೆ, ಕೂಡಲೇ ಬಡವರ ಬಿಪಿಎಲ್‌ಕಾರ್ಡ್‌ಗಳನ್ನು ರದ್ದುಗೊಳಿಸುವುದನ್ನು ನಿಲ್ಲಿಸಿ ಎಂದು ಬಿಜೆಪಿ ತಾಕೀತು ಮಾಡಿದೆ.