ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಳೆದ ಒಂದು ವರ್ಷದಿಂದ ಅಪರಾಧ ಪ್ರಕರಣಗಳು ಕಡಿಮೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಮೈಸೂರಿನ ಕೆ.ಆರ್. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ,
ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ ಮಾತನಾಡಿದರು. ಅಪರಾಧ ಪ್ರಕರಣಗಳ ವಿರುದ್ಧ ಕಠಿಣ ಕ್ರಮವಾಗುತ್ತದೆ. ಆದರೆ ಕಳೆದ ಒಂದು ವರ್ಷದಿಂದ ರಾಜ್ಯದಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಾಗಿದ್ದು,
ಬಿಜೆಪಿ ಅವಧಿಗೆ ಹೋಲಿಸಿದರೆ ನಮ್ಮ ಸರ್ಕಾರದ ಅವಧಿಯಲ್ಲಿ ಅಪರಾಧಗಳ ಸಂಖ್ಯೆ ಕಡಿಮೆಯಿದೆ. ಅಪರಾಧಗಳನ್ನು ಗಮನಾರ್ಹವಾಗಿ ಕಡಿಮೆ ಮಾಡಲು ಸರ್ಕಾರ ಖಂಡಿತ ಪ್ರಯತ್ನಿಸುತ್ತದೆ ಎಂದರು.