ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರದಲ್ಲಿ ಇಡೀ ಕರ್ನಾಟಕ ವಕ್ಫ್ ಆಸ್ತಿ ಆಗುವ ದಿನ ದೂರವಿಲ್ಲ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹುಚ್ಚನ ಮದುವೆಯಲ್ಲಿ ಉಂಡವನೇ ಜಾಣ” ಎನ್ನುವಂತೆ ಈ “ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರದಲ್ಲಿ ಲೂಟಿ ಹೊಡದವನೇ ಜಾಣ” ಎನ್ನುವ ನಿರ್ಧಾರಕ್ಕೆ ಬಂದಂತಿದೆ ವಕ್ಫ್ ಮಂಡಳಿ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ ಬೇಸರ ವ್ಯಕ್ತ ಪಡಿಸಿದ್ದಾರೆ.

- Advertisement - 

ಔರಂಗಜೇಬ್, ಟಿಪ್ಪು ಸುಲ್ತಾನ್ ಅಪರಾವತಾರದಂತಿರುವ ಈ ಕಾಂಗ್ರೆಸ್ ಸರ್ಕಾರವನ್ನ ಹೀಗೆ ಬಿಟ್ಟರೆ ವಿಶ್ವೇಶ್ವರಯ್ಯನವರು ಓದಿದ ಶಾಲೆಯನ್ನು ವಕ್ಫ್ ಆಸ್ತಿ ಎನ್ನುತ್ತೆ, ವಿಶ್ವೇಶ್ವರಯ್ಯನವರು ಕಟ್ಟಿದ ಕನ್ನಂಬಾಡಿ ಕಟ್ಟೆಯೂ ವಕ್ಫ್ ಆಸ್ತಿ ಆಗುತ್ತದೆ.

- Advertisement - 

ಅಣ್ಣ ಬಸವಣ್ಣನವರ ಅನುಭವ ಮಂಟಪವೂ ವಕ್ಫ್ ಆಸ್ತಿ ಆಗುತ್ತೆ, ಕೆಂಪೇಗೌಡರು ಕಟ್ಟಿದ ಬೆಂಗಳೂರು ವಕ್ಫ್ ಆಸ್ತಿ ಆಗುತ್ತೆ ಎಂದು ಅವರು ವಿಷಾದಿಸಿದರು.

ಸ್ವಾಮಿ ಸಿದ್ದರಾಮಯ್ಯನವರೇ, ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನ ಈ ಕೂಡಲೇ ಸಂಪುಟದಿಂದ ವಜಾ ಮಾಡಿ. ಇಲ್ಲವಾದರೆ ಇಡೀ ಕರ್ನಾಟಕ ವಕ್ಫ್ ಆಸ್ತಿ ಆಗುವ ದಿನ ದೂರವಿಲ್ಲ ಎಂದು ಅಶೋಕ್ ಆತಂಕ ವ್ಯಕ್ತ ಪಡಿಸಿದ್ದಾರೆ.

- Advertisement - 

 

Share This Article
error: Content is protected !!
";