ಪತ್ರಿಕೆ ಸಂಪಾದಕ ಪ್ರಕಾಶ್ ಗುಳೇದಗುಡ್ಡ ಅವರ ನಿಧನಕ್ಕೆ ಸಂತಾಪ

News Desk

ಚಂದ್ರವಳ್ಳಿ ನ್ಯೂಸ್, ದಾವಣಗೆರೆ :
ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ಬಾಗಲಕೋಟೆ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ಉದಯ ವಿಜಯ ಕನ್ನಡ ದಿನಪತ್ರಿಕೆ ಸಂಪಾದಕರಾಗಿದ್ದ ಪ್ರಕಾಶ್ ಗುಳೇದಗುಡ್ಡ  (42 ವಯಸ್ಸು) ಅವರು ಶುಕ್ರವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ, ಅವರ ಕುಟುಂಬದವರಿಗೆ ನೋವು, ದು:ಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ನೀಡಲಿ ಎಂದು ಭಗವಂತನಲ್ಲಿ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ, ಉಪಾಧ್ಯಕ್ಷ ಮಂಜುನಾಥ ಅಬ್ಬಿಗೆರಿ,

- Advertisement - 

ರಾಮಕೃಷ್ಣ ಮಾಮರ, ಭೀಮರಾಯ ಹದ್ದಿನಾಳ, ಗೋವಿಂದಪ್ಪ, ಮೊಹಮ್ಮದ್ ಯೂನುಸ್, ಹೆಚ್.ಎಸ್.ಹರೀಶ್, ಪ್ರಧಾನ ಕಾರ್ಯದರ್ಶಿ ಟಿ.ಎಸ್.ಕೃಷ್ಣಮೂರ್ತಿ, ಖಜಾಂಚಿ ಎಸ್.ಟಿ.ವೇದಮೂರ್ತಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್.ಶಿವಶಂಕರ್, ರಾಜು ತಳವಾರ, ರಮೇಶ್ ರೆಡ್ಡಿ, ಕಾರ್ಯದರ್ಶಿಗಳಾದ ಬಿ. ದಿನೇಶ್ ಗೌಡಗೆರೆ, ಹೆಚ್.ನರಸಿಂಹರಾಜು ಸೇರಿದಂತೆ ರಾಜ್ಯ ಸಂಘದ ಪದಾಧಿಕಾರಿಗಳು, ನಾಮನಿರ್ದೇಶನ ಸದಸ್ಯರು, ಜಿಲ್ಲಾ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಪ್ರಾರ್ಥಿಸಿದ್ದಾರೆ.

ಮೃತ ಪ್ರಕಾಶ್ ಗುಳೇದಗುಡ್ಡ ಅವರು ಕ್ರಿಯಾಶೀಲ ವ್ಯಕ್ತಿಯಾಗಿದ್ದರು. ಸಂಘದ ಬಲವರ್ಧನೆಗೆ ಸದಾ ಶ್ರಮಿಸುತ್ತಿದ್ದರು. ಚಿಕ್ಕವಯಸ್ಸಿನಲ್ಲೇ ಹೃದಯಾಘಾತಕ್ಕೆ ಬಲಿಯಾಗಿರುವುದು ದುರಂತವೇ ಸರಿ. ಒಬ್ಬ ನಿಷ್ಠಾವಂತ ವ್ಯಕ್ತಿಯನ್ನು  ನಮ್ಮ ಸಂಘ ಕಳೆದು ಕೊಂಡಂತಾಗಿದೆ ಎಂದು ಸಂಘದ ಪದಾಧಿಕಾರಿಗಳು ಶೋಕ ವ್ಯಕ್ತಪಡಿಸಿದ್ದಾರೆ.

- Advertisement - 

 

 

Share This Article
error: Content is protected !!
";