ಹಸುಗಳ ಮೇಲೆ ನಡೆದ ವಿಕೃತ ಕೃತ್ಯ ಖಂಡನೀಯ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಮೇಲೆ ನಡೆದ ವಿಕೃತ ಕೃತ್ಯವನ್ನು ಖಂಡಿಸಿ
, ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

- Advertisement - 

ಕರ್ನಾಟಕ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಮತಾಂಧರ ವಿಕೃತಿ ಹೆಚ್ಚಾಗುತ್ತಲೇ ಇದೆ. ಚಾಮರಾಜಪೇಟೆಯ ಪಶು ಆಸ್ಪತ್ರೆಯನ್ನು ಎತ್ತಂಗಡಿ ಮಾಡುವ ಸಂಚು ಸರ್ಕಾರ ಬಂದಾಗಿನಿಂದಲೂ ನಡೆಯುತ್ತಿದೆ.

- Advertisement - 

ಹೀಗಾಗಿಯೇ ಚಾಮರಾಜಪೇಟೆಯಲ್ಲಿ ಹಸುಗಳೇ ಇಲ್ಲದಂತೆ ಮಾಡಲು ಮತಾಂಧರಿಗೆ ಸುಪಾರಿ ಕೊಟ್ಟವರು ಯಾರು? ಈ ಕುರಿತು ಪೊಲೀಸರು ಸಮಗ್ರವಾಗಿ ತನಿಖೆ ನಡೆಸಿ ಕಿಡಿಗೇಡಿಗಳ ವಿರುದ್ಧ ಕ್ರಮತೆಗೆದುಕೊಳ್ಳಬೇಕಿದೆ ಎಂದು ಅವರು ಆಗ್ರಹಿಸಿದ್ದಾರೆ.

 

- Advertisement - 

 

Share This Article
error: Content is protected !!
";