ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಕಾಂಗ್ರೆಸ್ ಸರ್ಕಾರ ಅವೈಜ್ಞಾನಿಕ ಶಕ್ತಿ ಯೋಜನೆ ಆರಂಭಿಸಿದಾಗಿನಿಂದ ವಿದ್ಯಾರ್ಥಿಗಳ ಗೋಳು ಕೇಳದಂತಾಗಿದೆ. ಬಸ್ಸಿಗಾಗಿ ಗಂಟೆಗಟ್ಟಲೆ ಕಾದು ಕಾದು ವಿದ್ಯಾರ್ಥಿಗಳು ಇತರ ಸರಕು ಸಾಗಣೆ ವಾಹನಗಳಲ್ಲಿ ಸಂಚರಿಸುವಂತಾಗಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ ಮಾಡಿದೆ.
ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರೇ ಸಾರಿಗೆ ಸಂಸ್ಥೆ ಲಾಭದಲ್ಲಿದೆ ಎಂದ ಮೇಲೆ ವಿವಿಧ ರೂಟ್‌ಗಳಲ್ಲಿ ಕಡಿಮೆ ಬಸ್ಸುಗಳೇಕೆ ಸಂಚರಿಸುತ್ತಿವೆ ?
ಸಾರಿಗೆ ಇಲಾಖೆ ಹಾಗೂ ಸರ್ಕಾರ ದುರ್ಘಟನೆಗಳು ಸಂಭವಿಸುವ ಮುನ್ನ ಎಚ್ಚೆತ್ತುಕೊಂಡು ಸಮಸ್ಯೆ ಪರಿಹರಿಸಬೇಕು ಎಂದು ಬಿಜೆಪಿ ತಾಕೀತು ಮಾಡಿದೆ.