ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ರದ್ದು ಕೋರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ
, ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ನೀಡಿರುವ ಪೂವಾನುಮತಿ ರದ್ದು ಪಡಿಸಲು ಕೋರಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಹೈಕೋರ್ಟ್ ರದ್ದುಪಡಿಸಿ ತೀರ್ಪು ನೀಡಿದೆ.

ಹೈಕೋರ್ಟ್ ಏಕ ಸದಸ್ಯ ಪೀಠದ ನ್ಯಾಯಾಧೀಶರಾದ ಎಂ ನಾಗಪ್ರಸನ್ನ ಅವರು ಸೆ.24 ರ ಮಂಗಳವಾರ ತೀರ್ಪು ಪ್ರಕಟಿಸಿದ್ದಾರೆ. ಸಿಎಂ ಸಲ್ಲಿಸಿದ್ದ ತಕರಾರು ಅರ್ಜಿಯ ಕುರಿತಂತೆ, ಇತ್ತೀಚಿಗೆ ಹಿರಿಯ ವಕೀಲರು ಸುದೀರ್ಘ ವಾದ ಪ್ರತಿವಾದ ಮಂಡಿಸಿದ್ದರು. ವಾದ -ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರು ತೀರ್ಪನ್ನು ಕಾಯ್ದರಿಸಿದ್ದರು.

ಹೈಕೋರ್ಟ್ ಏಕ ಸದಸ್ಯ ಪೀಠದ ತೀರ್ಪು ಸಿಎಂ ಸಿದ್ದರಾಮಯ್ಯ ಅವರಿಗೆ ಭಾರೀ ಹಿನ್ನಡೆ ಉಂಟು ಮಾಡಿದೆ. ಏಕ ಸದಸ್ಯ ಪೀಠದ ತೀರ್ಪಿನ ವಿರುದ್ಧ, ಹೈಕೋರ್ಟ್ ನ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಪ್ರಕರಣದ ವಿಚಾರಣೆಯು ಇಡೀ ದೇಶದ ಗಮನ ಸೆಳೆದಿತ್ತು. ಪ್ರಸ್ತುತ ಹೈಕೋರ್ಟ್ ಸಿಎಂ ಅರ್ಜಿಯನ್ನು ವಜಾಗೊಳಿಸಿದೆ.

 

 

- Advertisement -  - Advertisement -  - Advertisement - 
Share This Article
error: Content is protected !!
";