ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ದಿವ್ಯಾಂಗರಿಗೆ ಮೋದಿ ಅವರ ಸರ್ಕಾರದ ಮಹತ್ವದ ಕೊಡುಗೆ” ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.
ಕೇಂದ್ರ ಸರ್ಕಾರದ ವಸತಿ ಹಂಚಿಕೆಯಲ್ಲಿ ಅಂಗವಿಕಲರಿಗೆ 4% ಮೀಸಲಾತಿ ನೀಡಿ ಮಹತ್ವದ ನಿರ್ಧಾರ ಕೈಗೊಂಡಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಾಗೂ ಕೇಂದ್ರ ಸಚಿವರಾದ mlkhattar ಅವರಿಗೂ ಹೃತ್ಪೂರ್ವಕ ಅಭಿನಂದನೆಗಳನ್ನು ಅವರು ತಿಳಿಸಿದ್ದಾರೆ.
ಕೇಂದ್ರದ ಮಹತ್ವದ ಸುಗಮ್ಯ ಭಾರತ್ ಅಭಿಯಾನದಡಿಯಲ್ಲಿ ಎಲ್ಲಾ ನಾಗರಿಕರಿಗೆ ಸಮಾನ ಅವಕಾಶಗಳನ್ನು ನೀಡುವ ಮಹತ್ವದ ಉದ್ದೇಶದಿಂದ ಈ ನಿರ್ಧಾರವನ್ನು ಕೈಗೊಂಡಿರುವುದು ಹೆಮ್ಮೆಯ ಸಂಗತಿ.
ಅಂಗವಿಕಲರ ಹಕ್ಕುಗಳ (RPWD) ಕಾಯ್ದೆ, 2016 ರ ಜತೆಗೆ, ಅಂಗವಿಕಲರಿಗೆ ಕೇಂದ್ರ ಸರ್ಕಾರದ ವಸತಿ ಸೌಕರ್ಯಗಳಿಗೆ ನ್ಯಾಯಯುತ ಪ್ರವೇಶವನ್ನು ಖಚಿತಪಡಿಸಿಕೊಳ್ಳಲು ಎಸ್ಟೇಟ್ ನಿರ್ದೇಶನಾಲಯವು ಆದೇಶ ಹೊರಡಿಸಿದ್ದು
ಈ ನಿರ್ಧಾರದಿಂದ ಪ್ರತಿಯೊಬ್ಬ ನಾಗರಿಕರ ಸಬಲೀಕರಣಕ್ಕೆ ಸರ್ಕಾರದ ಬದ್ಧತೆ ಸಾಬೀತುಪಡಿಸಿದಂತಾಗಿದ್ದು ಭಾರತದ ಪ್ರತಿಯೊಬ್ಬ ಪ್ರಜೆಯ ಸೌಖ್ಯ ತನ್ನ ಆದ್ಯತೆ ಎಂದು ಪರಿಗಣಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವನ್ನು ಅಭಿನಂದಿಸುವೆ ಎಂದು ವಿಜಯೇಂದ್ರ ತಿಳಿಸಿದ್ದಾರೆ.