ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕ್ರಿಮಿನಲ್ ಪ್ರಕರಣ ಎದುರಿಸುತ್ತಿರುವ ವಂಚಕ ರಮೇಶ್ ಬಾಬು ಹೆಸರನ್ನು ವಿಧಾನ ಪರಿಷತ್‌ಗೆ ನಾಮನಿರ್ದೇಶನ ಎಷ್ಟು ಸರಿ ? ಎಂದು ಜೆಡಿಎಸ್ ಪ್ರಶ್ನಿಸಿದೆ.
ಸಿಎಂ ಸಿದ್ದರಾಮಯ್ಯ ಅವರೇ, ರಮೇಶ್ ಬಾಬು ವಿರುದ್ಧ ಹಲವು ಗಂಭೀರ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಈ ಸಂಬಂಧ ಕಳಂಕಿತ ರಮೇಶ್ ಬಾಬು ಅವರನ್ನು ವಿಧಾನ ಪರಿಷತ್‌ಗೆ ನಾಮನಿರ್ದೇಶನ ಮಾಡದಂತೆ ಗೌರವಾನ್ವಿತ ರಾಜ್ಯಪಾಲರ ಬಳಿ ದೂರು ಸಲ್ಲಿಕೆಯಾಗಿದೆ.
ನಕಲಿ ದಾಖಲೆಗಳನ್ನು ಸೃಷ್ಟಿಸಿ, ಫೋರ್ಜರಿ ಸಹಿಗಳ ಮೂಲಕ ಹತ್ತು ಹಲವು ಭೂ ಅವ್ಯವಹಾರದಲ್ಲಿ ತೊಡಗಿರುವ ಭೂಗಳ್ಳನ ಹೆಸರನ್ನು ಮೇಲ್ಮನೆಗೆ ನಾಮನಿರ್ದೇಶನ ಮಾಡಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ಇದು ಶೋಭೆಯೇ ? ಎಂದು ಜೆಡಿಎಸ್ ಪ್ರಶ್ನಿಸಿದೆ.