ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
“ನೂತನ ಜಿಲ್ಲಾಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ” ವನ್ನು ಬೆಂಗಳೂರಿನ ಬಿಜೆಪಿ ಪಕ್ಷದ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬುಧವಾರ ಆಯೋಜಿಸಲಾಗಿತ್ತು.
ರಾಜ್ಯದ ಎಲ್ಲಾ ನೂತನ ಜಿಲ್ಲಾಧ್ಯಕ್ಷರುಗಳಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ವಿಶೇಷ ಸಭೆ ನಡೆಸಲಾಯಿತು. ಇದೇ ವೇಳೆ ಜವಾಬ್ದಾರಿಯ ಚುನಾಯಿತ ಪತ್ರಗಳನ್ನು ವಿತರಿಸಿ ಆತ್ಮೀಯವಾಗಿ ಅಭಿನಂದಿಸಲಾಯಿತು.
ತಮಗೆ ದೊರೆತಿರುವ ಜವಾಬ್ದಾರಿಗಳನ್ನು ನಿರೀಕ್ಷೆ ಮೀರಿ ಅತ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸುವ ಮೂಲಕ ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಇನ್ನಷ್ಟು ಬಲವೃದ್ದಿಗೊಳಿಸುವ ನಿಟ್ಟಿನಲ್ಲಿ ತಾವು ನಿರೀಕ್ಷೆ ಮೀರಿ ಗುರಿ ಸಾಧಿಸಲೆಂದು ಹಾರೈಸಲಾಯಿತಲ್ಲದೇ, ಮುಂದಿನ ದಿನಗಳಲ್ಲಿ ಎದುರಾಗುವ ಎಲ್ಲಾ ಚುನಾವಣೆಗಳನ್ನು ಎದುರಿಸಲು ಸಜ್ಜಾಗುವಂತೆ ಮನವಿ ಮಾಡಲಾಯಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕರೆ ನೀಡಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಪಕ್ಷದ ಚುನಾವಣಾ ಸಂಚಾಲಕ ಗಣೇಶ್ ಕಾರ್ಣಿಕ್, ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ಪ್ರೀತಂಗೌಡ, ನಂದೀಶ್ ರೆಡ್ಡಿ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಎಲ್ಲಾ ನೂತನ ಜಿಲ್ಲಾಧ್ಯಕ್ಷರುಗಳು ಉಪಸ್ಥಿತರಿದ್ದರು.