ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ನಾಡು ನುಡಿಯ ಮೇಲೆ ನಿರಂತರ ದಬ್ಬಾಳಿಕೆ ನಡೆಯುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಕನ್ನಡ ಭಾಷೆ ಎನ್ನುವುದು ಕೇವಲ ಒಂದು ಭಾಷೆಯಾಗಿದೆ. ಹೀಗಾಗಿ ರಾಜ್ಯದಲ್ಲಿ ನಿರಂತರವಾಗಿ ಕನ್ನಡ ಭಾಷೆಗೆ ದ್ರೋಹ ಎಸಗುವ ಘಟನೆಗಳು ಜರುಗುತ್ತಿದೆ.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕನ್ನಡ ಮಾತನಾಡಿದ ಶಿಕ್ಷಕನ ರಾಜೀನಾಮೆ ಪಡೆದಿರುವ ಘಟನೆ ಅಕ್ಷಮ್ಯ. ಸರ್ಕಾರ ಕಟ್ಟುನಿಟ್ಟಿನ ಕ್ರಮಕೈಗೊಳ್ಳದೇ ಇರುವುದರಿಂದ ಈ ರೀತಿಯ ಘಟನೆಗಳು ಇತ್ತೀಚೆಗೆ ಸಾಮಾನ್ಯವಾಗಿದೆ.
ವಿಪಕ್ಷದಲ್ಲಿದ್ದಾಗ ಭಾಷೆಯ ಕುರಿತು ಭಾವನಾತ್ಮಕವಾಗಿ ಮಾತನಾಡಿದ್ದ ಕರ್ನಾಟಕ ಕಾಂಗ್ರೆಸ್ ನಾಯಕರು ಅಧಿಕಾರಕ್ಕೆ ಬಂದ ಕೂಡಲೇ ವರಸೆ ಬದಲಾಯಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ನಿರಂತರವಾಗಿ ತನ್ನ ಭಾಷಾ ವಿರೋಧಿ ನೀತಿಯನ್ನು ಪ್ರದರ್ಶಿಸುತ್ತಿದೆ ಎಂದು ಬಿಜೆಪಿ ದೂರಿದೆ.