ರಂಗಭೂಮಿ ಕಲಾವಿದ, ನಟ ಯಶವಂತ ಸರದೇಶಪಾಂಡೆ ನಿಧನ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಖ್ಯಾತ ರಂಗಭೂಮಿ ಕಲಾವಿದ, ಕನ್ನಡ ಸಿನೆಮಾ ನಟ ಹುಬ್ಬಳ್ಳಿಯ ಯಶವಂತ ಸರದೇಶಪಾಂಡೆ(60) ಅವರು ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ರಾಜ್ಯಾದ್ಯಂತ ಅನೇಕ ನಾಟಕಗಳಲ್ಲಿ ನಟಿಸಿ-ನಿರ್ದೇಶಿಸಿ ಅತ್ಯಂತ ಜನಪ್ರೀಯ ನಾಟಕಕಾರರಾಗಿದ್ದ ಹುಬ್ಬಳ್ಳಿಯ ಯಶವಂತ ಸರದೇಶಪಾಂಡೆ ಅವರು ಆಲ್ ದಿ ಬೆಸ್ಟ್ ನಾಟಕ ಅಭೂತಪೂರ್ವ ಯಶಸ್ಸು ಕಂಡಿತ್ತು. ಕಿರುತೆರೆ ಮತ್ತು ಚಲನಚಿತ್ರಗಳಲ್ಲಿ ಇವರು ಪಾತ್ರವಹಿಸುತ್ತಿದ್ದರು.

- Advertisement - 

ಕಲಾವಿದ ಯಶವಂತ ಸರದೇಶಪಾಂಡೆ ಅವರು ತೀವ್ರ ಹೃದಯಾಘಾತದಿಂದ ಅಕಾಲಿಕ ಸಾವು ಸಂಭವಿಸಿದ್ದು ಕನ್ನಡದ ರಂಗಭೂಮಿ ಹಾಗೂ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ.
ಅವರನ್ನು ಫೋರ್ಟಿಸ್ ಆಸ್ಪತ್ರೆ ದಾಖಲು ಮಾಡಲಾಯಿತು. ಆದರೆ
, ಚಿಕಿತ್ಸೆ ಫಲಕಾರಿಯಾಗದೇ ಸಾವಪ್ಪನ್ನಪ್ಪಿದ್ದಾರೆ. ಅವರ ಸಾವಿಗೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ.

ಯಶವಂತ ಅವರು ಕಿರುತೆರೆ ಮತ್ತು ಚಲನಚಿತ್ರಗಳಲ್ಲೂ ನಟನೆ ಮಾಡುತ್ತಿದ್ದರು. ಆರಂಭದಲ್ಲಿ ಅವರು ನಾಟಕಗಳನ್ನು ನಿರ್ದೇಶಿಸಿ, ನಟಿಸಿ ಜನಪ್ರಿಯತೆ ಪಡೆದುಕೊಂಡಿದ್ದರು. ಅವರು ಹೆಚ್ಚು ಹಾಸ್ಯ ನಾಟಕಗಳಲ್ಲಿ ನಟಿಸುತ್ತಿದ್ದರು. ಕರ್ನಾಟಕ ಮಾತ್ರವಲ್ಲದೆ, ದೇಶ-ವಿದೇಶಗಳಲ್ಲಿಯೂ ನಾಟಕಗಳನ್ನು ಮಾಡಿದ್ದರು. ಅವರಿಗೆ ಅಪಾರ ಅಭಿಮಾನಿಗಳಿದ್ದಾರೆ.

- Advertisement - 

ಯಶವಂತ ಅವರು ನಾಟಕಗಳಲ್ಲಿ ಮಾತ್ರವಲ್ಲದೆ ಹಲವು ಸಿನಿಮಾ ಹಾಗೂ ಧಾರಾವಾಹಿಗಳಲ್ಲೂ ನಟಿಸಿದ್ದರು. ಅಲ್ಲಿಯೂ ಹಾಸ್ಯ ಪಾತ್ರಗಳ ಮೂಲಕವೇ ಗುರುತಿಸಿಕೊಂಡಿದ್ದರು. ಆಲ್ ದಿ ಬೆಸ್ಟ್ನಾಟಕ ಅಭೂತಪೂರ್ವ ಯಶಸ್ಸು ಕಂಡಿತ್ತು.ರಾಮ ಶ್ಯಾಮ ಭಾಮಾಸಿನಿಮಾದಲ್ಲಿ ನಟಿಸಿ ಅವರು ಗಮನ ಸೆಳೆದಿದ್ದರು.

Share This Article
error: Content is protected !!
";