ಮೇಳೆಕೋಟೆ ಆಂಜನೇಯ ದೇವಸ್ಥಾನದಲ್ಲಿ ಕಳ್ಳತನ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ದೊಡ್ಡಬಳ್ಳಾಪುರ:
ಮೇಳೆಕೋಟೆ ಗ್ರಾಮದ ಮುಜರಾಯಿ ಇಲಾಖೆಗೆ ಸೇರಿದ  ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಮೂರ್ತಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ ರಾತ್ರಿ ನಡೆದಿದೆ. 

ದೇವಾಲಯದ ಬಾಗಿಲು ಮೀಟಿ ಒಳ ನುಗ್ಗಿರುವ ಕಳ್ಳರು, ರಾಮ ಲಕ್ಷ್ಮಣ ವಿಗ್ರಹಕ್ಕೆ ಅಳವಡಿಸಿದ್ದ ಸುಮಾರು ಎರಡೂವರೆ ಲಕ್ಷ ಬೆಲೆ ಬಾಳುವ ಬೆಳ್ಳಿ ಕೀರೀಟವನ್ನು ಕದ್ದು ಕಳ್ಳರು ರಾತ್ರೋರಾತ್ರಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement - 

ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು  ತನಿಖೆ ಪ್ರಾರಂಭಿಸಿದ್ದಾರೆ.

- Advertisement - 
Share This Article
error: Content is protected !!
";