ಚಂದ್ರವಳ್ಳಿ ನ್ಯೂಸ್, ತುಮಕೂರು:
ಇನೋವಾ ಕಾರು ಪಲ್ಟಿಯಾಗಿ ತುಮಕೂರಿನ ಮೂರು ಮಂದಿ ಸಾವನ್ನಪ್ಪಿರುವ ಘಟನೆ ಆಂದ್ರ ಪ್ರದೇಶದ ನಂದ್ಯಾಲ್ ಜಿಲ್ಲೆಯ ಪಯಾಪಿಲಿ ಮಂಡಲದ ಪೊದೊಡ್ಡಿ ಗ್ರಾಮದ ಬಳಿ ಸಂಭವಿಸಿದೆ.
ಇನೋವಾ ಕಾರಿನಲ್ಲಿ ದೇವಾಲಯಗಳಿಗೆ ತೆರಳಿ ವಾಪಸ್ಸಾಗುತ್ತಿದ್ದಾಗ ಸಂಭವಿಸಿದ ರಸ್ತೆ ಅಪಘಾತದಲ್ಲಿ ತುಮಕೂರಿನ ಮೂವರು ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿರುವ ಘಟನೆ ಭಾನುವಾರ ನಡೆದಿದೆ.
ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಜನರು ಸ್ನೇಹಿತರಾಗಿದ್ದು, ತುಮಕೂರು ಮೂಲದವರು ಎಂದು ತಿಳಿದುಬಂದಿದೆ. ಅವರು ಪ್ರಸಿದ್ಧ ಶ್ರೀ ಶೈಲಂ ಮಲ್ಲಿಕಾರ್ಜುನ ಸ್ವಾಮಿ ಮತ್ತು ಮಹಾನಂದಿ ದೇವಸ್ಥಾನಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ತುಮಕೂರಿಗೆ ವಾಪಸ್ಸಾಗುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಕಾರಿನಲ್ಲಿದ್ದ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ಮೃತರನ್ನು ಸಂತೋಷ್, ಲೋಕೇಶ್ ಮತ್ತು ನವೀನ್ ಎಂದು ಗುರುತಿಸಲಾಗಿದೆ. ಗಾಯಗೊಂಡ ಇತರ ಮೂವರು ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಕರ್ನೂಲ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.