ಚಂದ್ರವಳ್ಳಿ ನ್ಯೂಸ್, ತುಮಕೂರು:
ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ಅಂಗಡಿ ಬೇಕರಿಗೆ ನುಗ್ಗಿದ ಪರಿಣಾಮ ಅಂಗಡಿ ಬಳಿ ಇದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಕೋಳಾಲ ಗ್ರಾಮದಲ್ಲಿ ನಡೆದಿದೆ.
ಅಪಘಾತದಲ್ಲಿ ಮೃತಪಟ್ಟವರನ್ನು ರಂಗಶಾಮಯ್ಯ ಮತ್ತು ಬೈಲಪ್ಪ ಎಂದು ಗುರುತಿಸಲಾಗಿದೆ. ಕೋಲಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಂಗಡಿಗೆ ನುಗ್ಗಿದ ಲಾರಿ ಸಂಪೂರ್ಣ ಹಳೆಯದಾಗಿದ್ದು, ಚಾಲಕನ ಬೇಜವಾಬ್ದಾರಿತನವೇ ಇದಕ್ಕೆ ಕಾರಣ. ಅಲ್ಲದೇ ಅಪಘಾತ ಸಂಭವಿಸಿ ಅರ್ಧ ಗಂಟೆಯಾದರೂ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್ ಬಾರದೇ ಇರುವುದು ಕೂಡ ವ್ಯವಸ್ಥೆಯ ನಿರ್ಲಕ್ಷ್ಯ ಎಂದು ಗ್ರಾಮಸ್ಥ ಶ್ರೀಧರ್ ಗಂಭೀರ ಆರೋಪ ಮಾಡಿದರು.
ಗ್ರಾಮದ ರಸ್ತೆಗಳಲ್ಲಿ ಹಂಪ್ಗಳನ್ನು ಹಾಕದೇ ಇರುವುದು ಅಪಘಾತಕ್ಕೆ ಕಾರಣವಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್, ಕೊರಟಗೆರೆ ತಾಲೂಕಿನ ಕೋಳಾಲದಲ್ಲಿ ಗೊಬ್ಬರ ತುಂಬಿದ್ದ ಲಾರಿ ಅಂಗಡಿಗೆ ನುಗ್ಗಿದ ಪರಿಣಾಮ ಸಂಭವಿಸಿದ ದುರ್ಘಟನೆಯಲ್ಲಿ ಮೂವರು ಸಾವನ್ನಪ್ಪಿರುವ ಸುದ್ದಿ ತಿಳಿದು ಆಘಾತವಾಯಿತು.
ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವೆ. ದು:ಖತಪ್ತ ಕುಟುಂಬವರ್ಗದವರಿಗೆ ನನ್ನ ತೀವ್ರ ಸಂತಾಪಗಳು ಎಂದು ತಿಳಿಸಿದ್ದಾರೆ.