ತುಮಕೂರು ರೈಲ್ವೆ ನಿಲ್ದಾಣ ಅಭಿವೃದ್ಧಿ : ಸಚಿವ ಸೋಮಣ್ಣ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ತುಮಕೂರು ರೈಲ್ವೆ ನಿಲ್ದಾಣವನ್ನು ಏರ್‌ಪೋರ್ಟ್ ಮಾದರಿಯಲ್ಲಿ ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಮೇಲ್ದರ್ಜೆಗೇರಿಸಲು ಕೇಂದ್ರ ರೈಲ್ವೆ ಸಚಿವಾಲಯವು ೮೮.೪೧ ಕೋಟಿ ರೂ.ಅನುದಾನ ಬಿಡುಗಡೆ ಮಾಡಿದೆ ಎಂದು ಕೇಂದ್ರ ರೈಲ್ವೆ ಜಲಶಕ್ತಿ ಖಾತೆ ರಾಜ್ಯ ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.

- Advertisement - 

ಬೆಂಗಳೂರಿನಂತೆ ತುಮಕೂರು ಕೂಡ ಅತಿವೇಗವಾಗಿ ಬೆಳೆಯುತ್ತಿದ್ದು, ಸಾಮಾನ್ಯ ರೈಲ್ವೆ ಪ್ರಯಾಣಿಕರಿಗೂ ವಿಶ್ವ ದರ್ಜೆಯ ಸೌಲಭ್ಯಗಳು ಸಿಗಬೇಕೆಂಬ ಭವಿಷ್ಯದ ಸಾರಿಗೆ ವ್ಯವಸ್ಥೆಯನ್ನು  ಮನಗಂಡು ತುಮಕೂರು ರೈಲ್ವೆ ನಿಲ್ದಾಣವನ್ನು ಸಿದ್ದಗಂಗಾ ಮಠದ ಮಾದರಿಯ ವಾಸ್ತುಶಿಲ್ಪದ ವಿನ್ಯಾಸದಲ್ಲಿ ನಿರ್ಮಿಸಲಾಗುವುದು.

- Advertisement - 

ಬಹುಮಹಡಿ ಕಟ್ಟಡ, ಸುಸಜ್ಜಿತ ಪಾಕಿಂಗ್ ವ್ಯವಸ್ಥೆ, ಆಗಮನ-ನಿರ್ಗಮನಕ್ಕೆ ಪ್ರತ್ಯೇಕ ದ್ವಾರಗಳು, ಏರ್‌ಕಾನ್‌ಕೋರ್ಸ್, ದಿವ್ಯಾಂಗ ಸ್ನೇಹಿ ಲಿಫ್ಟ್-ಎಸ್ಕಲೇಟರ್‌ಗಳು, ರಿಟೇಲ್, ವಾಣಿಜ್ಯ ಕಟ್ಟಡಗಳನ್ನು ನೂತನ ನಿಲ್ದಾಣ ಒಳಗೊಂಡಿರುತ್ತದೆ.

       ತುಮಕೂರು ನಗರದ ಕೇಂದ್ರ ಬಿಂದುವಾಗಿ ನಿಲ್ದಾಣ ಅಭಿವೃದ್ದಿ ಹೊಂದಲಿದ್ದು, ರೈಲ್ವೆ ಸಚಿವಾಲಯದಿಂದ ಅನುದಾನ ಬಿಡುಗಡೆಗೆ ಸಹಕರಿಸಿದ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವ ಅಶ್ವಿನಿ ವೈಷ್ಣವ ಅವರಿಗೆ ಕ್ಷೇತ್ರದ ಸಂಸದ ವಿ.ಸೋಮಣ್ಣ ಕೃತಜ್ಞತೆ ಸಲ್ಲಿಸಿದ್ದಾರೆ.

- Advertisement - 

 

Share This Article
error: Content is protected !!
";