ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಾನದಂಡಗಳ ನೆಪದಲ್ಲಿ ದಿಢೀರನೆ ಏಕಾಏಕಿ ಲಕ್ಷಾಂತರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಿರುವ ಕರ್ನಾಟಕ ಕಾಂಗ್ರೆಸ್ ಸರ್ಕಾರದ ನಡೆಯ ಹಿಂದೆ ಬಡವರಿಗೆ ಮೋಸ ಮಾಡುವ ದೊಡ್ಡ ಹುನ್ನಾರವೇ ಅಡಗಿದೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಾಗ್ದಾಳಿ ಮಾಡಿದೆ.
ಬಿಪಿಎಲ್ ಕಾರ್ಡು ರದ್ದು ಮಾಡುವ ಮೂಲಕ ಅನ್ನಭಾಗ್ಯದ ಹಣಕ್ಕೆ ಕನ್ನ ಹಾಕುವುದರ ಜೊತೆಗೆ, ಗೃಹಲಕ್ಷ್ಮಿ ಹಣಕ್ಕೂ ಕತ್ತರಿ ಹಾಕಲಿದೆ ಈ ಬಡವರ ವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ಅವರು ಟೀಕಿಸಿದ್ದಾರೆ.
ನುಡಿದಂತೆ ನಡೆದ ಸರ್ಕಾರ ಎನ್ನುವುದು ಕೇವಲ ಬಿಟ್ಟಿ ಪ್ರಚಾರಕ್ಕೆ ಮಾತ್ರ ಸೀಮಿತವಾಗಿದ್ದು, ನುಡಿಯುವುದು ಒಂದು, ಮಾಡುವುದು ಇನ್ನೊಂದು ಎನ್ನುವುದೇ ಈ ಸರ್ಕಾರದ ನಿಜವಾದ ಅಸಲೀಯತ್ತು ಎಂದು ಅಶೋಕ್ ಬೇಸರ ವ್ಯಕ್ತ ಪಡಿಸಿದ್ದಾರೆ.