ಶ್ರೀಗಂಧ ಮರಗಳ ಕಳ್ಳತನಕ್ಕೆ ಬಂದಿದ್ದ ಇಬ್ಬರು ಯುವಕರಿಗೆ ವಿದ್ಯುತ್ ಸ್ಪರ್ಶಿಸಿ ಸ್ಥಳದಲ್ಲೇ ಸಾವು

News Desk

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಸಾವು ಯಾವ ಮೂಲದಲ್ಲಿ ಹೇಗೆ ಬರುತ್ತದೆ ಎನ್ನುವುದು ತಿಳಿಯುವುದಿಲ್ಲ. ಅಡಿಕೆ ತೋಟದಲ್ಲಿದ್ದ ಶ್ರೀಗಂಧ ಮರಗಳನ್ನು ಕಳವು ಮಾಡಲು ಬಂದಿದ್ದ ಇಬ್ಬರು ಯುವಕರು ವಿದ್ಯುತ್ ಶಾಕ್ ಆಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಿರಿಯೂರು ತಾಲೂಕಿನಲ್ಲಿ ಜರುಗಿದೆ.

- Advertisement - 

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ  ಕೃಷ್ಣಾಪುರ ಗ್ರಾಮದ ಜಯರಾಂ ಎಂಬುವವರ ಅಡಿಕೆ ತೋಟದಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತರು ಮಧ್ಯಪ್ರದೇಶ ಮೂಲದ ಮೋಹಿತ್ (24) ಹಾಗೂ ಕತರ್ವ (38) ಎಂದು ಗುರುತಿಸಲಾಗಿದೆ.

- Advertisement - 

ಜಯರಾಂ ಅವರ ಅಡಿಕೆ ತೋಟದಲ್ಲಿ ಕೆಲ ಶ್ರೀಗಂಧ ಮರಗಳ ಕಳ್ಳತನ ಮಾಡಲು ಹೋಗಿ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರೂ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಅಬ್ಬಿನಹೊಳೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

- Advertisement - 

Share This Article
error: Content is protected !!
";