ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನಲ್ಲಿ ನಡೆದಿರುವ ಕಾಲ್ತುಳಿತದಿಂದ 11 ಮಂದಿ ಸಾವಿಗೆ ಹೊಣೆಗಾರರನ್ನಾಗಿ ಪೊಲೀಸ್ ಕಮಿಷನರ್ ಸೇರಿ ಹಲವರ ಅಮಾನತು ಮಾಡಿದ್ದಾರೆ. ಹೊಸ ವರ್ಷಾಚರಣೆ ವೇಳೆ ಕಮಿಷನರ್ ದಯಾನಂದ್ ಇದ್ದರು.
ಲಕ್ಷಾಂತರ ಜನ ಸೇರಿದ್ದರೂ ಸಣ್ಣ ಅಹಿತಕರ ಘಟನೆಗೆ ಅವಕಾಶ ಕೊಟ್ಟಿರಲಿಲ್ಲ. ನಾನು ಬಿ. ದಯಾನಂದ್ ಪರ ವಕಾಲತ್ತು ಮಾಡುತ್ತಿಲ್ಲ. ಸಸ್ಪೆಂಡ್ ಆದ ಡಿಸಿಪಿ ಒಬ್ಬರು ಅಪ್ಪಯ್ಯನ ಆತ್ಮೀಯರು ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.
ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ದುರ್ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿಐಡಿ, ನ್ಯಾಯಾಂಗ ತನಿಖೆ ಮತ್ತು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ ಎಂದು ಹೇಳುತ್ತಾರೆ. ಮೂರೂ ಸಂಸ್ಥೆಗಳು ತನಿಖೆ ನಡೆಸುವುದರಿಂದ ನ್ಯಾಯ ದೊರೆಯುವುದಿಲ್ಲ. ಯಾವುದೇ ಸತ್ಯ ಹೊರಬರಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.