ಯು.ಪಿ.ಎಸ್.ಸಿ ಪರೀಕ್ಷಾ ತರಬೇತಿಗೆ ಅರ್ಜಿ ಆಹ್ವಾನ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿನ ಯುಪಿಎಸ್‌ಸಿ ಮುಖ್ಯ ಪರೀಕ್ಷಾ ಪೂರ್ವ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದ, 21 ರಿಂದ 35 ವರ್ಷದ ಒಳಗಿನ ರಾಜ್ಯದ ನಿವಾಸಿಗಳು ಅರ್ಜಿ ಸಲ್ಲಿಸಬಹುದು.

- Advertisement - 

ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಜಾತಿ ಹಾಗೂ ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ಅರ್ಜಿಯನ್ನು ಈ ಜಾಲತಾಣ  https://dom.karnataka.gov.in     ದಲ್ಲಿ ಆನ್‌ಲೈನ್ ಮೂಲಕ ಸಲ್ಲಿಸಲು ಜೂನ್ 21 ಕೊನೆಯ ದಿನವಾಗಿದೆ.

- Advertisement - 

ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

- Advertisement - 
Share This Article
error: Content is protected !!
";