ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಚಿತ್ರದುರ್ಗ ಜಿಲ್ಲೆಯ ಹೊರವಲಯದಲ್ಲಿ ಪದವಿ ವಿದ್ಯಾರ್ಥಿಯನ್ನು ಅತ್ಯಾಚಾರ ಮಾಡಿ, ಕೊಲೆ ಮಾಡಿರುವ ಆರೋಪಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಮುಖಂಡ ಎಂ ರವೀಂದ್ರಪ್ಪ ಆಗ್ರಹಿಸಿದರು.
ಪತ್ರಿಕಾ ಪ್ರಕಟಣೆ ಹೇಳಿಕೆ ನೀಡಿರುವ ಅವರು ತಾಲ್ಲೂಕಿನ ಐಮಂಗಲ ಹೋಬಳಿಯ ಕೊವೆರಹಟ್ಟಿ ಗ್ರಾಮದ ದಲಿತ ಹುಡುಗಿಯನ್ನು ಅತ್ಯಾಚಾರ ಮಾಡಿ, ಸಾಯಿಸಿ, ಆಕೇಯ ದೇಹದ ಮೇಲೆ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವುದು ಸಮಾಜ ತಲೆ ತಗ್ಗಿಸುವಂತೆ ಮಾಡಿದೆ. ಆರೋಪಿಯನ್ನು ಪೊಲೀಸರು ಬಂದಿಸಿ ತನಿಖೆ ನಡೆಸುತ್ತಿದ್ದಾರೆ.
ಪ್ರೇಮ ನಿವೇದನೆಗೆ ಒಪ್ಪಲಿಲ್ಲ ಎಂಬ ಕಾರಣಕ್ಕೆ ಆಕೆಯನ್ನು ಹತ್ಯೆ ಮಾಡಿದ್ದಾನೆಂದು ಆರೋಪಿಯು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಅತ್ಯಾಚಾರಿಯ ವಿರುದ್ಧ ಕ್ರಮ ಕೈಗೊಳ್ಳಬೇಕು. ಹಾಗೆಯೇ ನೊಂದ ಕುಟುಂಬಕ್ಕೆ ಪರಿಹಾರ ಘೋಷಣೆ ಮಾಡಬೇಕು. ನೊಂದ ಮೃತ ಹುಡುಗಿಯ ಕುಟುಂಬಕ್ಕೆ ನ್ಯಾಯ ಒದಗಿಸಬೇಕು.
ನಾವು ಕೂಡ ನೊಂದ ಕುಟುಂಬದ ಪರವಾಗಿ ಇದ್ದೇವೆ. ಕುಟುಂಬಕ್ಕೆ ನ್ಯಾಯ ದೊರಕದಿದ್ದರೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.
ರಾಜ್ಯದಲ್ಲಿ ಪದೇ ಪದೇ ಅತ್ಯಾಚಾರ ಪ್ರಕರಣಗಳು ವರದಿಯಾಗುತ್ತಿವೆ. ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರಕರಣಗಳನ್ನು ತಡೆಯುವಲ್ಲಿ ವಿಫಲವಾಗಿದೆ. ಕೂಡಲೇ ಸರ್ಕಾರ ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಆಗ್ರಹಿಸಿದರು.

