ಸಿಎಂಗೆ ಸಿಬಿಐ ಬಗ್ಗೆ ಬಹಳ ವಿಶ್ವಾಸ ಬಂದಂತೆ ಕಾಣುತ್ತಿದೆ-ವಿಜಯೇಂದ್ರ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಹಗರಣಗಳ ಸುಳಿಯಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಮಾಡಿರುವ ನನ್ನ ವಿರುದ್ಧದ ಆರೋಪ ಕಪೋಲಕಲ್ಪಿತ. ವಕ್ಫ್ ಆಸ್ತಿ ದುರುಪಯೋಗದ ಕುರಿತು ಅನ್ವರ್ ಮಾಣಿಪ್ಪಾಡಿ ವರದಿ ಕೊಟ್ಟಿದ್ದರು. ನಂತರ ಉಪಲೋಕಾಯುಕ್ತ ನ್ಯಾ‌.ಆನಂದ್ ಅವರು ವರದಿ ಕೊಟ್ಟಿದ್ದರು.

- Advertisement - 

2016 ರಲ್ಲಿ ವಕ್ಫ್ ಆಸ್ತಿ ಕಬಳಿಕೆ ಬಗ್ಗೆ ವರದಿ ನೀಡಿದ್ದರು. ಆದರೆ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉಪಲೋಕಾಯುಕ್ತರ ವರದಿ ಮುಚ್ಚಿ ಹಾಕಿದ್ದರು. ಅಲ್ಪಸಂಖ್ಯಾತರ ಆಯೋಗದ ಹಿಂದಿನ‌ಅಧ್ಯಕ್ಷರು ಸರ್ಕಾರಕ್ಕೆ ಶಿಫಾರಸು ಮಾಡಿದ್ದನ್ನು ಸಿದ್ದರಾಮಯ್ಯನವರ ಸಚಿವ ಸಂಪುಟ ತಿರಸ್ಕರಿಸಿತ್ತು

- Advertisement - 

ಮುಖ್ಯಮಂತ್ರಿಗಳಿಗೆ ಈಗ ಸಿಬಿಐ ಬಗ್ಗೆ ಬಹಳ ವಿಶ್ವಾಸ ಬಂದಂತೆ ಕಾಣುತ್ತಿದ್ದು, ಈ ಆಮಿಷದ ಗುರುತರ ಆರೋಪವನ್ನು ಸಿಬಿಐಗೆ ವಹಿಸಲಿ ಜತೆಗೆ ಅನ್ವರ್ ಮಾಣಿಪ್ಪಾಡಿ ಅವರ ವರದಿಯ ತನಿಖೆಯನ್ನೂ ಸಿಬಿಐಗೆ ನೀಡಲಿ ಎಂದು ಆಗ್ರಹಿಸುವ ಜತೆಗೆ ಸವಾಲು ಹಾಕುವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";