ಸ್ಥಾನಮಾನಕ್ಕಾಗಿ ವಲಸಿಗ ಕಾಂಗ್ರೆಸ್ಸಿಗರ ಯುದ್ದ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಆಪರೇಷನ್‌ಹಸ್ತಕ್ಕೆ ಒಳಗಾಗಿ ಕರ್ನಾಟಕ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡವರು ಈಗ ಕಾಂಗ್ರೆಸ್ಸಿನ ಒಳಜಗಳದಲ್ಲಿ ಹೈರಾಣಾಗುತ್ತಿದ್ದಾರೆ. ಸಚಿವ ಸ್ಥಾನ, ನಿಗಮ ಮಂಡಳಿಗಳಲ್ಲಿ ಸ್ಥಾನಮಾನ ಪಡೆಯಲು ಹೋರಾಡಬೇಕಿದ್ದ ವಲಸಿಗ ಕಾಂಗ್ರೆಸ್ಸಿಗರಿಗೆ, ಈಗ ಸಹಕಾರಿ ಬ್ಯಾಂಕ್‌ಗಳಲ್ಲಿನ ಹುದ್ದೆಗಾಗಿ ಯುದ್ಧ ಮಾಡಬೇಕಾದ ಪರಿಸ್ಥಿತಿಯಿದೆ ಎಂದು ಬಿಜೆಪಿ ಲೇವಡಿ ಮಾಡಿದೆ.

ವಲಸಿಗರನ್ನು ಹೀನಾಮಾನವಾಗಿ ನಡೆಸಿಕೊಳ್ಳುತ್ತಿರುವ ಕಾಂಗ್ರೆಸ್‌, ಯಾವುದೇ ಕಿಮ್ಮತ್ತು ಇಲ್ಲದೆ ಬೀದಿ ರಂಪಾಟ ಮಾಡುತ್ತಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್‌ಪಕ್ಷಗಳಿಂದ ಕಾಂಗ್ರೆಸ್ಸಿಗೆ ವಲಸೆ ಹೋದವರು ಅಕ್ಷರಶಃ ನಿರ್ಲಕ್ಷ್ಯಕ್ಕೆ ಒಳಗಾಗುತ್ತಿದ್ದಾರೆ, ಸ್ಥಾನಮಾನಕ್ಕಾಗಿ ಬಕ ಪಕ್ಷಿಯಂತೆ ಕಾಯುತ್ತಿದ್ದಾರೆ ಎಂದು ಬಿಜೆಪಿ ದೂರಿದೆ.

Share This Article
error: Content is protected !!
";