ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
‘ರಾಹುಲ್ ಗಾಂಧಿ ಅವರೇ, ಮತಗಳ್ಳ ಕಾಂಗ್ರೆಸ್ ನಾಯಕರ ರಾಜೀನಾಮೆ ಯಾವಾಗ ಪಡೆಯುತ್ತೀರಿ ? ಎಂದು ಜೆಡಿಎಸ್ ತೀಕ್ಷ್ಣವಾಗಿ ಪ್ರಶ್ನಿಸಿದೆ.
2024ರ ಲೋಕಸಭಾ ಚುನಾವಣೆ ವೇಳೆ ಹಾಸನದಲ್ಲಿ ಮತದಾರರಿಗೆ ಹಣ ಹಂಚಿ ಕಾಂಗ್ರೆಸ್ ವಾಮಮಾರ್ಗದಲ್ಲಿ ಚುನಾವಣೆ ಗೆದ್ದಿದೆ.
ಕರ್ನಾಟಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರವಾಗಿ 7 ಕೋಟಿ ರೂ. ಹಣವನ್ನು ಹಂಚಿಕೆ ಮಾಡಿರುವ ಬಗ್ಗೆ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಮಾತನಾಡಿರುವ ಆಡಿಯೋ ಕಾಂಗ್ರೆಸ್’ಪಕ್ಷದ ಚುನಾವಣಾ ಅಕ್ರಮಕ್ಕೆ ಸಾಕ್ಷಿಯಾಗಿದೆ ಎಂದು ಜೆಡಿಎಸ್ ತಿಳಿಸಿದೆ.
ಮತಗಳ್ಳತನದ ಬೊಬ್ಬೆ ಹೊಡೆಯುತ್ತಿರುವ ರಾಹುಲ್ ಗಾಂಧಿ ಅವರೇ, ನಿಮಗೆ ನೈತಿಕತೆ ಇದ್ದರೆ ಚುನಾವಣಾ ಅಕ್ರಮ ಎಸಗಿರುವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ರಾಜ್ಯಸಭಾ ಸದಸ್ಯ ಜಿ.ಸಿ ಚಂದ್ರಶೇಖರ್ ಮತ್ತು ಶಾಸಕ ಶಿವಲಿಂಗೇಗೌಡ ಅವರನ್ನು ಮೊದಲು ಕಿಕ್ ಔಟ್ ಮಾಡಿ ಎಂದು ಜೆಡಿಎಸ್ ಆಗ್ರಹ ಮಾಡಿದೆ.

