ರೈತರಿಗೆ ಆಗುತ್ತಿರುವ ನಷ್ಟಕ್ಕೆ ಯಾರು ಹೊಣೆ? ಸಚಿವರೇ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರೇ, ಸಿಂಧನೂರಿನಲ್ಲಿ ಜೋಳ ಬೆಳೆಗಾರರು ಬೀದಿಗೆ ಬಂದು ಹೋರಾಟ ಮಾಡುತ್ತಿರುವ ವಿಷಯ ತಮ್ಮ ಗಮನಕ್ಕೆ ಬಂದಿದೆಯೇ? ಯಾವ ಕಾರಣಕ್ಕಾಗಿ ಇವತ್ತು ಸಿಂಧನೂರಿನಲ್ಲಿ ಬಂದ್ ಕರೆ ನೀಡಲಾಗಿದೆ ಎನ್ನುವುದಾದರೂ ಗೊತ್ತಿದೆಯೇ? ಎಂದು ವಿಪಕ್ಷ ನಾಯಕ ಆರ್.ಅಶೋಕ್ ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

- Advertisement - 

ಡಿಸೆಂಬರ್ 31ರ ಒಳಗೆ ಜೋಳ ಖರೀದಿ ನೋಂದಣಿ ಮುಗಿಯಬೇಕಿತ್ತು. ಜನವರಿ 31ರೊಳಗೆ ಜೋಳ ಖರೀದಿ ಪ್ರಕ್ರಿಯೆ ಪೂರ್ಣಗೊಳ್ಳಬೇಕಿತ್ತು. ಆದರೆ ರಾಜ್ಯ ಕರ್ನಾಟಕ ಕಾಂಗ್ರೆಸ್ ಸರ್ಕಾರ ನಾಲ್ಕು ತಿಂಗಳ ನಂತರ ಅಂದರೆ ಮೇ ತಿಂಗಳಲ್ಲಿ ಖರೀದಿ ಆರಂಭಿಸಿದ್ದರಿಂದ ಜೋಳಕ್ಕೆ ನುಸಿ ಮತ್ತು ಹುಳ ಬಂದಿದೆ.

- Advertisement - 

ಈಗ ಏಕಾಏಕಿ ಜೋಳ ಖರೀದಿಯನ್ನೇ ನಿಲ್ಲಿಸಲಾಗಿದೆ. ಇದರಿಂದ ರೈತರಿಗೆ ಆಗುತ್ತಿರುವ ನಷ್ಟಕ್ಕೆ ಯಾರು ಹೊಣೆ? ಎಂದು ಅಶೋಕ್ ಪ್ರಶ್ನಿಸಿದ್ದಾರೆ.

ಈ ರೈತವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಅನ್ನದಾತರ ಕಣ್ಣೀರಿನ ಶಾಪ ತಟ್ಟದೇ ಇರದು ಎಂದು ಅಶೋಕ್ ಎಚ್ಚರಿಸಿದ್ದಾರೆ.

- Advertisement - 

 

Share This Article
error: Content is protected !!
";