ಕಿರು ಅಧ್ಯಯನ ನಡೆಸಲು 1.50 ಲಕ್ಷ ಫೆಲೋಶಿಪ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರವು 2024-25ನೇ ಸಾಲಿನಲ್ಲಿ ಕಿರು ಅಧ್ಯಯನ ನಡೆಸಲು ತಲಾ ರೂ.1.50 ಲಕ್ಷಗಳಂತೆ ಫೆಲೋಶಿಪ್ ನೀಡುತ್ತದೆ.

ಕನಕದಾಸರ ಮುಂಡಿಗೆ ಸಾಹಿತ್ಯತಾತ್ವಿಕ ವಿವೇಚನೆ, ಕರ್ನಾಟಕ ತತ್ವಪದಗಳ ಚಾರಿತ್ರಿಕ ಅಧ್ಯಯನ, ಕನ್ನಡದಲ್ಲಿ ಅನುಭಾವ ಸಾಹಿತ್ಯತಾತ್ವಿಕ ಅಧ್ಯಯನ, ಕನ್ನಡದಲ್ಲಿ ಕೀರ್ತನ ಸಾಹಿತ್ಯದ ಸಮಾಜೋಸಾಂಸ್ಕøತಿಕ ಅಧ್ಯಯನ ವಿಷಯಗಳ ಕುರಿತು ಅಧ್ಯಯನ ನಡೆಸಬೇಕು.

12 ತಿಂಗಳ ಅವಧಿಯ ಅಧ್ಯಯನ ಯೋಜನೆಯ ಬಗ್ಗೆ ಆಸಕ್ತ ಯುವ ಸಂಶೋಧನಾರ್ಥಿಗಳು ತಮ್ಮ ವಿದ್ಯಾರ್ಹತೆ, ಸಂಶೋಧನೆಯ ಬಗೆಗಿನ ಅನುಭವ ಹಾಗೂ ತಮ್ಮ ಆಸಕ್ತಿ ಕ್ಷೇತ್ರವನ್ನು ಒಳಗೊಂಡ ವಿವರಗಳನ್ನು ಹಾಗೂ ಆಯ್ಕೆ ಮಾಡಿಕೊಂಡ ವಿಷಯವನ್ನು ಕುರಿತು ಅಧ್ಯಯನ ವ್ಯಾಪ್ತಿ ಮತ್ತು ಆಕರ ಸಾಮಗ್ರಿಗಳನ್ನು ಒಳಗೊಂಡ ಸಂಕ್ಷಿಪ್ತ ಮಾಹಿತಿಯಿರುವ ಸಾರಲೇಖವನ್ನು ಅರ್ಜಿಯೊಂದಿಗೆ ಲಗತ್ತಿಸಿರಬೇಕು.

ಆಸಕ್ತಿಯಿರುವ 20 ರಿಂದ 55 ವರ್ಷ ವಯಸುಳ್ಳ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿಯನ್ನು ಅಧ್ಯಯನ ಕೇಂದ್ರ ಮೇಲ್ ಗೆ ಅಥವಾ ಅಂಚೆ ಮೂಲಕ ಕಳುಹಿಸಬಹುದು.
ಅರ್ಜಿ ಸಲ್ಲಿಸಲು 2025 ಮೇ 20 ಕೊನೆಯ ದಿನಾಂಕವಾಗಿದ್ದು, ಹೆಚ್ಚಿನ ಮಾಹಿತಿಗಳಿಗಾಗಿ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ದೂರವಾಣಿ ಸಂಖ್ಯೆ: 080-22113147 ಹಾಗೂ 6364529319 ಗೆ ಸಂಪರ್ಕಿಸಬಹುದು.

ವಿಳಾಸ: kanakaresearchcentre@gmail.com  ಮತ್ತು ವೆಬ್ ಸೈಟ್ https://kanakadasaresearchcenter.karnataka.gov.in  ಮೂಲಕ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು ಎಂದು ಸಂತಕವಿ ಕನಕದಾಸ ಮತ್ತು ತತ್ವಪದಕಾರ ಅಧ್ಯಯನ ಕೇಂದ್ರದ ಅಧ್ಯಕ್ಷ ಕಾ.. ಚಿಕ್ಕಣ್ಣ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article
error: Content is protected !!
";