10 ದಿನಗಳ ಉದ್ಯಮಶೀಲತಾ ತರಬೇತಿ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಇವರ ಪ್ರಾಯೋಜಕತ್ವದಲ್ಲಿ, ಧಾರವಾಡ ಸಿಡಾಕ್ ವತಿಯಿಂದ ಇದೇ ಸೆಪ್ಟಂಬರ್ ನಾಲ್ಕನೇ ವಾರದಲ್ಲಿ 10 ದಿನಗಳ ಉದ್ಯಮಶೀಲತಾ ತರಬೇತಿ ಶಿಬಿರ ಆಯೋಜಿಸಲಾಗಿದೆ.

- Advertisement - 

18 ರಿಂದ 55 ವರ್ಷ ವಯೋಮಿತಿಯೊಳಗಿನ 10ನೇ ತರಗತಿ ಪಾಸಾದ ಪರಿಶಿಷ್ಟ ಪಂಗಡದ ಉದ್ಯಮಾಕಾಂಕ್ಷಿಗಳು ಶಿಬಿರದಲ್ಲಿ ಪಾಲ್ಗೊಳ್ಳಬಹುದು. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು  ಪಾಸ್ಪೋರ್ಟ್ ಅಳತೆಯ 2 ಫೋಟೋ ಹಾಗೂ ಆಧಾರ್ ಕಾರ್ಡ್ನ ಪ್ರತಿಯೊಂದಿಗೆ ನಗರದ ಜೋಗಿಮಟ್ಟಿ ರಸ್ತೆಯಲ್ಲಿನ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಸಿಡಾಕ್ ಜಂಟಿ ನಿರ್ದೇಶಕ ಕಚೇರಿ ಅಥವಾ ತರಬೇತುದಾರ ಪಿ.ವಿಜಯ್ ಕುಮಾರ್ ದೂರವಾಣಿ ಸಂಖ್ಯೆ 7760270058 ಗೆ ಸಂಪರ್ಕಿಸಬಹದು.

- Advertisement - 

ತರಬೇತಿ ಕಾರ್ಯಕ್ರಮವು ಉಚಿತವಾಗಿದ್ದು, ತರಬೇತಿ ವೇಳೆಯಲ್ಲಿ ಊಟೋಪಚಾರ ಒದಗಿಸಲಾಗುವುದು. ಆಯ್ಕೆಯಾದ ಶಿಬಿರಾರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಪ್ರಯಾಣ ಮಾಡಿ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಪ್ರಕಟಣೆ ತಿಳಿಸಿದೆ.

 

- Advertisement - 

Share This Article
error: Content is protected !!
";