ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಸೆಮಿಕಂಡಕ್ಟರ್ ವಲಯದಲ್ಲಿ ಹೂಡಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ, ಮಂಡ್ಯ ಜಿಲ್ಲೆಯಲ್ಲಿ ಸೆಮಿಕಂಡಕ್ಟರ್ ಘಟಕ ಸ್ಥಾಪನೆಗೆ 100 ಎಕರೆ ಭೂಮಿ ನೀಡಲು ನಮ್ಮಸರ್ಕಾರ ಸಿದ್ಧವಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ ಪಾಟೀಲ್ ಭರವಸೆ ನೀಡಿದರು.
ನೂರು ಎಕರೆ ಜಮೀನಿನ ಜೊತೆಗೆ ಅಗತ್ಯವಿರುವ ನೀರು, ವಿದ್ಯುತ್ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಪಾಟೀಲ್ ತಿಳಿಸಿದರು.
ಸರ್ಕಾರದ ಈ ಕ್ರಮದಿಂದ ಮಂಡ್ಯ ಜಿಲ್ಲೆಗೆ ನೂತನ ಹೂಡಿಕೆಗಳು ಹರಿದು ಬಂದು, ಉದ್ಯೋಗಾವಕಾಶಗಳು ವಿಸ್ತರಿಸಲಿವೆ. ಅತ್ಯಾಧುನಿಕ ತಂತ್ರಜ್ಞಾನವನ್ನು ಆಹ್ವಾನಿಸುವ ಈ ಮಹತ್ವಾಕಾಂಕ್ಷೆಯ ಹೆಜ್ಜೆ, ಮುಂದಿನ ತಲೆಮಾರಿಗೂ ಭದ್ರ ಭವಿಷ್ಯ ಕಟ್ಟಿಕೊಡುವುದರ ಜೊತೆಗೆ ನಾಳಿನ ಹೊಸ ಕರ್ನಾಟಕ ನಿರ್ಮಾಣಕ್ಕೆ ದೃಢ ಅಡಿಪಾಯವಾಗಲಿದೆ ಎಂದು ಸಚಿವ ಎಂ.ಬಿ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

